ಶಿವಮೊಗ್ಗ : ಬಸ್​ ಹಾಗೂ ಬೈಕ್​​ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ

ಹಂಚಿಕೊಳ್ಳಿ
WhatsApp Facebook X Telegram
ಬೈಕ್_ ಹಾಗೂ ಬಸ್_ ನಡುವೆ ಬೀಕರ ಅಪಘಾತ
ಬೈಕ್_ ಹಾಗೂ ಬಸ್_ ನಡುವೆ ಬೀಕರ ಅಪಘಾತ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್​​​ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಾಗರ ರಸ್ತೆಯಲ್ಲಿರುವ  ಫ್ಲೈಓವರ್ ಬಳಿ ನಡೆದಿದೆ.

ಸಾಗರ ರಸ್ತೆಯ ಫ್ಲೈ ಓವರ್​ನ ಬಳಿ ಬೈಕ್​​ ಸವಾರರು ಬಸ್ಸೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ.ಘಟನೆಯ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ಅಪಘಾತದ ಕುರಿತಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor