ಶಿವಮೊಗ್ಗ: ಜಿಲ್ಲೆಯಲ್ಲಿ ಏಪ್ರಿಲ್ 16 ರಿಂದ ಮೇ 15 ರ ವರೆಗೆ ಸುಮಾರು 1 ತಿಂಗಳುಗಳ ಕಾಲ ಮನೆಗಣತಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳಾದಪ್ರಭುಲಿಂಗ ಕವಳಿಕಟ್ಟಿ ಹೇಳಿದ್ದಾರೆ.
ಅಪ್ಡೇಟ್ ಆದ ಶಿವಮೊಗ್ಗ ಪೊಲೀಸ್! ಏಪ್ರಿಲ್ನಿಂದಲೇ ಜಾರಿ! ಹೊರಬಿದ್ದ ಪ್ರಕಟಣೆ ಓದಿ
ಭಾರತದ ಜನಗಣತಿ 2027ರ ಅಂಗವಾಗಿ ಕರ್ನಾಟಕದಲ್ಲಿ ಮೊದಲ ಹಂತದ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ. ಒಟ್ಟು 30 ದಿನಗಳ ಕಾಲ ನಡೆಯುವ ಈ ಗಣತಿಯಲ್ಲಿ ಮನೆಗಳ ಸ್ಥಿತಿಗತಿ, ಲಭ್ಯವಿರುವ ಸೌಲಭ್ಯಗಳು ಹಾಗೂ ಆಸ್ತಿಪಾಸ್ತಿಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.
ಈ ಬಾರಿಯ ವಿಶೇಷವೆಂದರೆ, ಗಣತಿದಾರರು ಮನೆಗೆ ಬರುವ ಮೊದಲೇ ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕವೇ ಸ್ವಯಂ ಗಣತಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಗಣತಿಯ ಸಂದರ್ಭದಲ್ಲಿ ಮನೆಗಳ ಸ್ಥಿತಿಗತಿ, ಲಭ್ಯವಿರುವ ಮೂಲಭೂತ ಸೌಕರ್ಯಗಳು ಹಾಗೂ ಆಸ್ತಿಪಾಸ್ತಿಗಳ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತದೆ.
Shivamogga Census ಸ್ವಯಂ ಗಣತಿ ಮಾಡುವುದು ಹೇಗೆ
ಮೊದಲು ಅಧಿಕೃತ ಪೋರ್ಟಲ್ https://se.census.gov.in ಗೆ ಭೇಟಿ ನೀಡಿ ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಆಗಬೇಕು.
ನಿಮ್ಮ ವಾಸಸ್ಥಳವನ್ನು ಆಯ್ಕೆ ಮಾಡಿ, ನಕ್ಷೆಯಲ್ಲಿ (Map) ಮನೆಯನ್ನು ನಿಖರವಾಗಿ ಗುರುತಿಸಬೇಕು.
ಕೇಳಲಾದ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಸಬ್ಮಿಟ್ (Submit) ನೀಡಬೇಕು.
ಅರ್ಜಿ ಸಲ್ಲಿಕೆಯಾದ ನಂತರ ಸಿಗುವ SE ID (ಎಸ್.ಇ. ಐಡಿ) ಅನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು.
ಏಪ್ರಿಲ್ 16 ರ ನಂತರ ಗಣತಿದಾರರು ಮನೆಗೆ ಭೇಟಿ ನೀಡಿದಾಗ, ಈ ಐಡಿಯನ್ನು ತೋರಿಸಿದರೆ ಸಾಕು, ನಿಮ್ಮ ದತ್ತಾಂಶವನ್ನು ಸ್ಥಳದಲ್ಲೇ ಪರಿಶೀಲಿಸಿ ಪ್ರಕ್ರಿಯೆ ಪೂರ್ಣಗೊಳಿಸುತ್ತಾರೆ. ಒಂದು ವೇಳೆ ಸ್ವಯಂ ಗಣತಿ ಮಾಡಲು ಸಾಧ್ಯವಾಗದಿದ್ದರೆ, ಗಣತಿದಾರರೇ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆಯಲಿದ್ದಾರೆ.
ಜಿಲ್ಲೆಯ ಸಾರ್ವಜನಿಕರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ತಾಲೂಕು ಕಚೇರಿ ಅಥವಾ ಸ್ಥಳೀಯ ಆಡಳಿತ ಸಂಸ್ಥೆಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Shivamogga Census Mobile Self-Enumeration Guide

