ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 19 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಮಲೆನಾಡು ಟುಡೆ ಸುದ್ದಿಯ ಇವತ್ತಿ ಚಟ್ಪಟ್ ನ್ಯೂಸ್ ಇಲ್ಲಿದೆ.‘
ಕಂಡೆಕ್ಟರ್ ಮೇಲೆ ಹಲ್ಲೆ
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ಕಂಡೆಕ್ಟರ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಶಿಕಾರಿಪುರ-ಮುಡುಬಾಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್‌ನಲ್ಲಿ ನಿರ್ವಾಹಕರನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಲಾಗಿದೆ.ಗ್ರಾಮಸ್ಥರು ಬಸ್ ತಡೆದು ಹಲ್ಲೆ ನಡೆಸಿದರು ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಅನುಮಾನಸ್ಪದ ವ್ಯಕ್ತಿಯ ಓಡಾಟ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಓಡಾಡುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಈ ಸಂಬಂಧ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಅಪರಿಚಿತ ವ್ಯಕ್ತಿಯನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ವಿಳಾಸ ತಿಳಿಯದೇ ಬಂದಿದ್ದು ಗೊತ್ತಾಗಿದೆ. ಆನಂತರ ಖುದ್ದಾಗಿ ಪೊಲೀಸರೇ ಅಪರಿಚಿತ ವ್ಯಕ್ತಿಯ ಹೇಳಿದ ವಿಳಾಸಕ್ಕೆ ಆತನನ್ನು ತಲುಪಿಸಿದ್ದಾರೆ.
ಗೋವು ಕಳ್ಳತನ, ಆರೋಪಿಗಳು ಅರೆಸ್ಟ್
ಕಳೆದ ಕೆಲವು ವಾರಗಳಿಂದ ತೀರ್ಥಹಳ್ಳಿ ತಾಲ್ಲೂಕಿನ ಹಲವು ಪ್ರದೇಶಗಳಲ್ಲಿ ನಡೆಯುತ್ತಿದ್ದ ಗೋ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗಳು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದವು ಮತ್ತು ಕಾರಿನಲ್ಲಿ ಗೋವುಗಳನ್ನು ಸಾಗಿಸುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.
ಈ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆಯೂ ನಡೆದಿತ್ತು.ಈ ಪ್ರಕರಣಗಳ ತನಿಖೆಯನ್ನು ತೀವ್ರಗೊಳಿಸಿದ ತೀರ್ಥಹಳ್ಳಿ ಪೊಲೀಸರು, ಪಟ್ಟಣದ ಬೆಟ್ಟಮಕ್ಕಿಯ ಭೂತರಾಯನಕಟ್ಟೆ ಬಳಿ ಗೋವುಗಳನ್ನು ಕಳ್ಳತನ ಮಾಡಲು ಬಂದಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ..ಪೊಲೀಸ್ ತನಿಖೆಯ ಪ್ರಕಾರ, ಈ ಆರೋಪಿಗಳು ರಾತ್ರಿ ಸಮಯದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಹಿಡಿದು ತಮ್ಮ ಕಾರಿನಲ್ಲಿ ತುಂಬಿಸಿಕೊಂಡು ಶಿವಮೊಗ್ಗಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದರು ಎನ್ನಲಾಗಿದೆ.
