Shivamogga City Corporation : ಜುಲೈ 08 ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ: 6 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ತಮ್ಮ ನ್ಯಾಯಯುತ ಬೇಡಿಕೆಯನ್ನು ಇಡೇರಿಸುವಂತೆ ಆಗ್ರಹಿಸಿ ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ಮುಂಭಾಗ ಮಹಾನಗರ ಪಾಲಿಕೆ ನೌಕರರು ಮುಷ್ಕರ ನಡೆಸಿದರು.
ಮಹಾನಗರ ಪಾಲಿಕೆಗಳ ನೌಕರರ ಸಂಘದ ರಾಜ್ಯ ಸಮಿತಿ ಕರೆಯ ಮೇರೆಗೆ ಹಮ್ಮಿಕೊಂಡಿದ್ದ ಈ ಮುಷ್ಕರದಲ್ಲಿ ಸ್ವಚ್ಛತಾ ಕಾರ್ಮಿಕರೂ ಸೇರಿದಂತೆ ಪಾಲಿಕೆಯ ಎಲ್ಲಾ ವಿಭಾಗಗಳ ನೂರಾರು ನೌಕರರು ಪಾಲ್ಗೊಂಡಿದ್ದರು. ಈ ವೇಳೆ ಪ್ರತಿಭಟನಾಕಾರರು ನಮ್ಮ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವೇ ಇಡೇರಿಸುವಂತೆ ತಮ್ಮ ಬೇಡಿಕೆಯ ವಿವಿಧ ಫಲಕಗಳನ್ನು ಹಿಡಿದುಕೊಂಡು ಘೊಷಣೆಯನ್ನು ಕೂಗಿದರು. ವಿಷೇಶವೆಂದರೆ ಈ ಪ್ರತಿಭಟನೆಯಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಸಹ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷ ರಿನೌಕರರ 6 ಬೇಡಿಕೆಗಳು ತುಂಬಾ ಸರಳ ಬೇಡಿಕೆಗಳಾಗಿದ್ದು ರಾಜ್ಯ ಸರ್ಕಾರ ಅದನ್ನು ಸುಲಭವಾಗಿ ಈಡೇರಿಸಬಹುದು ಈ ನೌಕರರರ ಬೇಡಿಕೆಗಳು ನೈಜ ವಾಗಿರುವುದರಿಂದ ನಾನು ಸಹ ನೌಕರರಿಗೆ ಬೆಂಬಲವನ್ನು ಸೂಚಿಸುತ್ತಿದ್ದೇನೆ. ಹಾಗೆಯೇ ರಾಜ್ಯದ ಸರ್ಕಾರಿ ನೌಕರರ ಸಂಘ ಮಹಾನಗರ ಪಾಲಿಕೆ ಜೊತೆ ಕೈ ಜೋಡಿಸುತ್ತದೆ. ಮಹಾನಗರ ಪಾಲಿಕೆಯ ಎಲ್ಲಾ ನೌಕರರು ಸಹ ಬಹಳಾ ಹುಮ್ಮಸ್ಸಿನಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಇದೀಗ ರಾಜ್ಯ ಮಟ್ಟದಲ್ಲಿ ಸಹ ಇದರ ಬಗ್ಗೆ ಚರ್ಚೆ ನಡೆಯುತ್ತಿದ್ದು, ಆದಷ್ಟು ಬೇಗ ಸರ್ಕಾರ ಮಧ್ಯ ಪ್ರವೇಶ ಮಾಡಿ ಗಂಭೀರವಾಗಿ ನಿರ್ಣಯ ತೆಗೆದುಕೊಂಡು ಈ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು
Shivamogga City Corporation ನೌಕರರರ ಬೇಡಿಕೆಗಳೇನು
7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಯಥಾವತ್ತಾಗಿ ಸರ್ಕಾರ ಆರ್ಥಿಕ ಇಲಾಖೆಯಿಂದಲೇ ಅನುಧಾನವನ್ನು ಬಿಡುಗಡೆ ಮಾಡಲು ಮನವಿ.
ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಲು ಮನವಿ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆ.ಜಿ.ಐ.ಡಿ, ಜಿ.ಪಿ.ಎಫ್ ಸೌಲಭ್ಯವನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಲು ಮನವಿ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ / ಆರೋಗ್ಯ ಸಂಜೀವಿನಿಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಲು ಮನವಿ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಆಯೋಜಿಸುವ ಮನವಿ.
ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರು ಸುಮಾರು ವರ್ಷಗಳಿಂದ ವಿವಿಧ ವೃಂದದ ಹುದ್ದೆಗಳನ್ನು ಮುಂಬಡ್ತಿ ಪಡೆಯಲು ವಂಚಿತರಾಗಿರುವುದರಿಂದ ಕೂಡಲೇ ವೃಂದವಾರು ಮುಂಬಡ್ತಿ ನೀಡಲು ಮನವಿ.
Shivamogga City Corporation ಕೇಂದ್ರ ಸಂಘದ ನಿರ್ಣಾಯದಂತೆ ಇಂದಿನಿಂದ ಮಹಾನಗರಪಾಲಿಕೆಯ ಎಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಮಹಾನಗರಪಾಲಿಕೆಯ ಅವರಣದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ನೌಕರರು ಮುಷ್ಕರದಲ್ಲಿ ಭಾಗವಹಿಸಬೇಕೆಂದು ಈ ಮೂಲಕ ವಿನಂತಿಸಿಕೊಳ್ಳಲಾಗಿದೆ. ಕೂಡಲೇ ಕರ್ನಾಟಕ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಮಹಾನಗರ ಪಾಲಿಕೆ ನೌಕರರ ಸಂಘ ಆಗ್ರಹಿಸಿದೆ.
