SHIVAMOGGA NEWS TODAY

ಶಿವಮೊಗ್ಗದ ಕೆಲವೆಡೆ ಫುಟ್‌ಪಾತ್ ತೆರವು ಕಾರ್ಯಾಚರಣೆ : ಪಾದಚಾರಿಗಳ ಸಮಸ್ಯೆಗೆ ಮುಕ್ತಿ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shivamogga City Corporation ಶಿವಮೊಗ್ಗದ ಕೆಲವೆಡೆ ಫುಟ್‌ಪಾತ್ ತೆರವು ಕಾರ್ಯಾಚರಣೆ : ಪಾದಚಾರಿಗಳ ಸಮಸ್ಯೆಗೆ ಮುಕ್ತಿ

ಶಿವಮೊಗ್ಗ : ಬೀದಿಬದಿ ವ್ಯಾಪಾರಿಗಳ ಅತಿಕ್ರಮಣದಿಂದಾಗಿ ನಗರದ ಫುಟ್‌ಪಾತ್‌ಗಳು ಪಾದಚಾರಿಗಳ ಓಡಾಟಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿದ್ದವು. ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯ ಸಿಬ್ಬಂದಿಗಳು ನಗರದ ಕೆಲವೆಡೆ ಫುಟ್‌ಪಾತ್‌ಗಳ ಮೇಲೆ ಅತಿಕ್ರಮಿಸಿದ್ದ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ಬಿ.ಹೆಚ್. ರಸ್ತೆ ಮತ್ತು ಎನ್.ಟಿ. ರಸ್ತೆಯಲ್ಲಿ, ಹೆಲ್ತ್ ಇನ್ಸ್‌ಪೆಕ್ಟರ್ ವಿಕಾಸ್, ಸೂಪರ್‌ವೈಸರ್ ರವಿಕಿರಣ್ ಸೇರಿದಂತೆ ಪೌರಾಕಾರ್ಮಿಕರ ತಂಡ ಫುಟ್‌ಪಾತ್‌ಗಳಲ್ಲಿ ಅಳವಡಿಸಿದ್ದ ಅಂಗಡಿಗಳನ್ನು ತೆರವುಗೊಳಿಸಿತು. ಅಲ್ಲದೆ, ಫುಟ್‌ಪಾತ್ ಮೇಲೆ ಇರಿಸಿದ್ದ ಬೋರ್ಡ್‌ಗಳನ್ನು ತೆಗೆದುಹಾಕುವಂತೆ ವ್ಯಾಪಾರಿಗಳಿಗೆ ಸೂಚಿಸಲಾಯಿತು. ಸೂಚನೆಗಳನ್ನು ಪಾಲಿಸದ ವ್ಯಾಪಾರಿಗಳ ನಾಮಫಲಕಗಳನ್ನು ಮಹಾನಗರ ಪಾಲಿಕೆಯ ಸಿಬ್ಬಂದಿ ತಮ್ಮ ವಾಹನದಲ್ಲಿ ಕೊಂಡೊಯ್ದರು.

ಇದೇ ರೀತಿ, ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಗಾಂಧಿ ಬಜಾರ್‌ನಲ್ಲಿಯೂ ಅಂಗಡಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಶಿವಮೊಗ್ಗ ಮಹಾನಗರ ಪಾಲಿಕೆಯ ನಲ್ಮ್ (NALM) ವಿಭಾಗ ಮತ್ತು ಆರೋಗ್ಯ ವಿಭಾಗದ ಸಿಬ್ಬಂದಿ ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿ, ವ್ಯಾಪಾರಿಗಳಿಗೆ ತಮ್ಮ ಅಂಗಡಿಗಳನ್ನು ತೆರವುಗೊಳಿಸುವಂತೆ ಸೂಚಿಸಿದರು.

Shivamogga City Corporation ತೆರವುಗೊಳಿಸುತ್ತಿರುವ ಸಿಬ್ಬಂದಿಗಳು
Shivamogga City Corporation ತೆರವುಗೊಳಿಸುತ್ತಿರುವ ಸಿಬ್ಬಂದಿಗಳು

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.