SHIVAMOGGA | MALENADUTODAY NEWS | Aug 16, 2024 ಮಲೆನಾಡು ಟುಡೆ
ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ದಿನಾಂಕ ಘೋಷಿಸುವುದಾಗಿ ರಾಜ್ಯ ಚುನಾವಣಾ ಆಯೋಗ ಹೇಳಿದೆ. ಈ ನಡುವೆ ಶಿವಮೊಗ್ಗ ದೊಸ್ತಿ ಪಕ್ಷಗಳ ಮೈತ್ರಿ ವಿಚಾರ ಕುತೂಹಲ ಮೂಡಿಸಿದೆ.
ಕೆ ಬಿ ಪ್ರಸನ್ನಕುಮಾರ್
ಈ ಬಗ್ಗೆ ಮಾತನಾಡಿರುವ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ ಬಿ ಪ್ರಸನ್ನಕುಮಾರ್ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯು ಸೇರಿದಂತೆ ಮುಂದಿನ ಎಲ್ಲ ಚುನಾವಣೆಗಳನ್ನು ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ನಡೆಸುವ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಹೇಳಿದ್ದಾರೆ.
ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಈಗಾಗಲೇ ವಿಳಂಬವಾಗಿದೆ. ಆದಷ್ಟು ಬೇಗ ಚುನಾವಣೆ ನಡೆಯಬೇಕು ಎಂಬುದು ನಮ್ಮ ಒತ್ತಾಯ. ಈ ಹಿಂದೆ ಜಿಲ್ಲಾದಿಕಾರಿಗಳೇ ಚುನಾವಣೆ ನಡೆಸುವಂತೆ ಆಯಕ್ತರಿಗೆ ಪತ್ರ ಬರೆದಿದ್ದರು. ಆದರೆ ಇದಕ್ಕೆ ಉತ್ತರ ಬಂದಿಲ್ಲ. ಹೀಗಾಗಿ ಆದಷ್ಟು ಬೇಗ ಚುನಾವಣೆ ನಡೆಯಬೇಕಿದೆ ಎಂದಿದ್ದಾರೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ