ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ತೀರ್ಥಹಳ್ಳಿಯ ಕುರುವಳ್ಳಿ ನಾಗರಾಜ್ ಹಾಗೂ ರಾಜ್ಯ ಸರ್ಕಾರದ ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿ ಶಿವಮೊಗ್ಗದ ಯುವ ಕಾಂಗ್ರೆಸ್ ಮುಖಂಡ ಹೆಚ್.ಪಿ. ಗಿರೀಶ್ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿರುವ ಜಿಲ್ಲೆಯ ಇಬ್ಬರು ಮುಖಂಡರಿಗೆ ಹೊಸ ಜವಾಬ್ದಾರಿಗಳು ದೊರೆತಿವೆ.
ತೀರ್ಥಹಳ್ಳಿಯ ಕಾಂಗ್ರೆಸ್ ಮುಖಂಡ ಹಾಗೂ ಈಡಿಗ-ಬಿಲ್ಲವ ಸಮಾಜದ ಮುಖಂಡ ಕುರುವಳ್ಳಿ ನಾಗರಾಜ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕಾರ್ಮಿಕ ವಿಭಾಗದ ಉಸ್ತುವಾರಿ ಜವಾಬ್ದಾರಿಯನ್ನೂ ಅವರಿಗೆ ವಹಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷರ ಅನುಮೋದನೆಯ ಮೇರೆಗೆ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಶಾಂತವೀರ ನಾಯ್ಕ ಅವರು ಕುರುವಳ್ಳಿ ನಾಗರಾಜ್ ಅವರ ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕುರುವಳ್ಳಿ ನಾಗರಾಜ್, . ಪ್ರಸ್ತುತ ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಯುವ ಸಂಘಟನೆಯ ಜಿಲ್ಲಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇನ್ನೊಂದೆಡೆ ಶಿವಮೊಗ್ಗದ ಯುವ ಕಾಂಗ್ರೆಸ್ ಮುಖಂಡ ಹೆಚ್.ಪಿ. ಗಿರೀಶ್ ಅವರನ್ನು ರಾಜ್ಯ ಸರ್ಕಾರವು ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಕಾಂಗ್ರೆಸ್ ಪಕ್ಷದ ಯುವ ಸಂಘಟನೆಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಹೆಚ್.ಪಿ. ಗಿರೀಶ್ ಅವರಿಗೆ ಸರ್ಕಾರದ ಅಭಿವೃದ್ಧಿ ಮಂಡಳಿಯಲ್ಲಿ ನಿರ್ದೇಶಕ ಸ್ಥಾನ ದೊರೆತಿದೆ.
ಹೆಚ್.ಪಿ. ಗಿರೀಶ್ ಅವರು ಕಳೆದ 20 ವರ್ಷಗಳಿಗೂ ಹೆಚ್ಚು ಕಾಲದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಯುವ ಕಾಂಗ್ರೆಸ್ ಸಂಘಟನೆಯಲ್ಲಿ ತೊಡಗಿಸಿಕೊಂಡು ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಅವರು, ಪಕ್ಷದ ಸಂಘಟನೆಯನ್ನು ಬಲಪಡಿಸುವ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ.
