ಶಿವಮೊಗ್ಗ : ಅಪ್ರಾಪ್ತನಿಗೆ ಬೈಕ್ ನೀಡಿದ್ದ ಮಾಲೀಕನಿಗೆ 27,000 ದಂಡ ವಿಧಿಸಿದ ಕೋರ್ಟ್​

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಶಿವಮೊಗ್ಗ, ಮಲೆನಾಡು ಟುಡೆ ಸುದ್ದಿ : ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕರು ವಾಹನ ಚಾಲನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಸಂಚಾರ ಪೊಲೀಸರು ಜಾಗೃತಿ ಮೂಡಿಸುವ ಜೊತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಅಪ್ರಾಪ್ತರ ಕೈಗೆ ವಾಹನ ನೀಡುವ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದ್ದು, ಇದೀಗ ಶಿವಮೊಗ್ಗದಲ್ಲಿ ಅಪ್ರಾಪ್ತನಿಗೆ ಬೈಕ್ ಕೊಟ್ಟ ಮಾಲೀಕನಿಗೆ ನ್ಯಾಯಾಲಯ ಸಾವಿರಾರು ರೂಪಾಯಿ ದಂಡ ವಿಧಿಸಿದೆ.

ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2025ನೇ ಸಾಲಿನಲ್ಲಿ ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದ ವಾಹನ ಮಾಲೀಕನ ವಿರುದ್ಧ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು ಈ ಸಂಬಂಧ ಒಂದನೇ ಎ.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು  ಆಗಸ್ಟ್​ 19 ರಂದು ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಆರೋಪಿ ಮಾಲೀಕನಿಗೆ 27,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor