ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಅಪ್ರಾಪ್ತ ಬಾಲಕನಿಗೆ ಜುಪಿಟರ್ ಸ್ಕೂಟರ್ ಓಡಿಸಲು ಅನುವು ಮಾಡಿಕೊಟ್ಟಿದ್ದ ಸ್ಕೂಟರ್ ಮಾಲೀಕರಿಗೆ 4ನೇ ಹೆಚ್ಚುವರಿ ಸಿಜೆ & ಜೆ.ಎಂ.ಎಫ್.ಸಿ ನ್ಯಾಯಾಲಯವು ಬರೋಬ್ಬರಿ 26,500 ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಘಟನೆಯ ವಿವರ ನೋಡುವುದಾದರೆ, ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಶಿವಮೊಗ್ಗ ನಗರದ ಆಲ್ಕೊಳ ಸರ್ಕಲ್ ಬಳಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದಾಗ, ವಿನೋಬನಗರ ಪೊಲೀಸ್ ಚೌಕಿ ರಸ್ತೆ ಕಡೆಯಿಂದ ಆಲ್ಕೊಳ ಸರ್ಕಲ್ ಕಡೆಗೆ ಜುಪಿಟರ್ ಸ್ಕೂಟಿಯನ್ನು ಬಾಲಕನೊಬ್ಬ ಓಡಿಸುತ್ತಿರುವುದು ಕಂಡುಬಂದಿದೆ. ಅದನ್ನು ತಡೆದು ಪರಿಶೀಲನೆ ನಡೆಸಿದಾಗ ಆತ ಅಪ್ರಾಪ್ತನಾಗಿರುವುದು ಕಂಡುಬಂದಿದೆ. ಬಳಿಕ ಸ್ಕೂಟರ್‌ನ ಮಾಲೀಕರನ್ನು ಸಂಪರ್ಕಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಕೋರ್ಟ್‌ಗೆ ಚಾರ್ಜ್ ಶೀಟ್ನ್ನು ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ 4ನೇ ಹೆಚ್ಚುವರಿ ಸಿಜೆ & ಜೆ.ಎಂ.ಎಫ್.ಸಿ ನ್ಯಾಯಾಲಯವು ಮಾಲೀಕರಿಗೆ ರೂ. 26,500 ದಂಡ ವಿಧಿಸಿ ತೀರ್ಪು ನೀಡಿದೆ.
