26ರ ಯುವಕನಿಗೆ 2 ದಶಕಗಳ ಕಾಲ ಸೆರೆವಾಸ! 4 ಲಕ್ಷ ಪರಿಹಾರ! ಶಿವಮೊಗ್ಗ ನ್ಯಾಯಾಲಯದ ಮಹತ್ವದ ತೀರ್ಪು!

ajjimane ganesh

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಕೋರ್ಟ್ ಮತ್ತೊಂದು ಮಹತ್ವದ ತೀರ್ಪು ನೀಡಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಅಡಿಯಲ್ಲಿ ಆರೋಪಿಯೊಬ್ಬನಿಗೆ 20 ವರ್ಷ ಶಿಕ್ಷೆ ವಿಧಿಸಿದೆ. 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 26 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನಿಗೆ ಶಿವಮೊಗ್ಗ ನ್ಯಾಯಾಲಯ ಈ ಶಿಕ್ಷೆ ನೀಡಿದೆ. 

Shivamogga Court Punishes
Shivamogga Court Punishes

Shivamogga Court Punishes

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್, ಬಿಗ್​ ಸುದ್ದಿ  

ಘಟನೆ ಕುರಿತು ಹೇಳುವುದಾದರೆ, 2023ನೇ ಸಾಲಿನ ಘಟನೆಯಿದು, ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಅಂದಿನ  ತನಿಖಾಧಿಕಾರಿ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿ, ಆರೋಪಿ ವಿರುದ್ಧ  ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC 1, ಶಿವಮೊಗ್ಗ (Additional District and Sessions Court FTSC 1, Shivamogga) ಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ್ದರು. 

 ಶಿವಮೊಗ್ಗದ ಪುರೋಹಿತರ ಕೈ ಹಿಡಿದ ಅಹಮದಾಬಾದ್ ಯುವತಿ, ನೆಂಟಸ್ಥನ  ಬೆಳೆದಿದ್ದು ಹೇಗೆ

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು. ಇದೀಗ ಪ್ರಕರಣ ವಿಚಾರಣೆ ಮುಗಿದಿದ್ದು, ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC 1 ನ (Shivamogga Court Punishes) ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್, ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1,00,000ರೂಪಾಯಿ ದಂಡ ವಿಧಿಸಿದ್ದಾರೆ. ಮೇಲಾಗಿ ನೊಂದ ಬಾಲಕಿಗೆ 75,000/- ರೂ ಪರಿಹಾರ ನೀಡುವುದರ ಜೊತೆಗೆ ಸರ್ಕಾರದಿಂದ ಬಾಲಕಿಗೆ 4,00,000 ರೂಪಾಯಿ ಪರಿಹಾರ ಒದಗಿಸುವಂತೆ ಸೂಚಿಸಿದ್ದಾರೆ.

Shivamogga Court Punishes
Shivamogga Court Punishes

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, ಪೋಕ್ಸೋ ಪ್ರಕರಣ ಅಪ್ರಾಪ್ತೆ ಮೇಲೆ ದೌರ್ಜನ್ಯ ಎಸಗಿದವನಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ಶಿವಮೊಗ್ಗ ನ್ಯಾಯಾಲಯ , POCSO Case Shivamogga Court Punishes Accused with 20 Years Imprisonment for Assault on Minor
Share This Article