ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 22 ವರ್ಷದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡವನ್ನು ವಿಧಿಸಿದೆ.
ನಗರದ ಪ್ರದೇಶವೊಂದರಲ್ಲಿ 22 ವರ್ಷದ ಯುವಕನೊಬ್ಬ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಹಿನ್ನೆಲೆಯಲ್ಲಿ ನಗರದ ತಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಪೂರೈಸಿದ ಪಿಐ ಮಂಜುನಾಥ್ ಬಿ. ಅವರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ಸರ್ಕಾರದ ಅಭಿಯೋಜಕರಾದ ಶ್ರೀಧರ್ ವಾದ ಮಂಡಿಸಿದ್ದರು.ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ನಿಂಗನಗೌಡ ಬಿ. ಪಾಟೀಲ್ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹವಾಸ ಮತ್ತು 1,10,000 ರೂ. ದಂಡ, ನೊಂದ ಬಾಲಕಿಗೆ 5,00,000 ರೂ. ಪರಿಹಾರವನ್ನು ನೀಡಲು ಆದೇಶಿಸಿರುತ್ತಾರೆ.
