ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳಿಗೆ ಶಿವಮೊಗ್ಗದ ನ್ಯಾಯಾಲಯವು ಒಂದು ವರ್ಷದ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ವಿವರ
ಇವತ್ತು ಶಿವಮೊಗ್ಗದಲ್ಲಿ ಏನೆಲ್ಲಾ ನಡೆಯಿತು, ಇ-ಪೇಪರ್ ಓದಿ
2022ರ ಮೇ 30ರಂದು ರಾತ್ರಿ ಶಿಕಾರಿಪುರದ ಸಂಗಮ್ ಬಾರ್‌ನಲ್ಲಿ ಮೌನೇಶಪ್ಪ (42) ಎಂಬುವವರ ಮೇಲೆ ಆರೋಪಿಗಳು ಏಕಾಏಕಿ ಹಲ್ಲೆ ನಡೆಸಿದ್ದರು. ಆರೋಪಿಗಳಾದ ಉಡುಗಣಿ ಲೋಹಿತ (21) ಮತ್ತು ಸೋಮಶೇಖರ ಅಲಿಯಾಸ್ ಪಾರಿವಾಳ ಸೋಮು (20) ಎಂಬುವವರು ಮೌನೇಶಪ್ಪ ಅವರ ಮೇಲೆ ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದರು. ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ನಿರೀಕ್ಷಕರಾದ ರವಿ ಕುಮಾರ್ ಎ. ಅವರು ಪ್ರಕರಣದ ತನಿಖೆ ನಡೆಸಿ, ಸಾಕ್ಷ್ಯಾಧಾರಗಳೊಂದಿಗೆ ನ್ಯಾಯಾಲಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಿತು. ಸರ್ಕಾರದ ಪರವಾಗಿ ಅಭಿಯೋಜಕಿ ಮಮತ ಬಿ.ಎಸ್. ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲ ಅವರು, ಆರೋಪಿಗಳ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರಿಗೂ ತಲಾ 1 ವರ್ಷದ ಕಾರಾಗೃಹ ಶಿಕ್ಷೆ ಮತ್ತು 10,500 ರೂಪಾಯಿಗಳ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
Shivamogga Court Sentences Two to Jail for Assault


Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.