ಶಿವಮೊಗ್ಗ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 10 ವರ್ಷ ಜೈಲು ಶಿಕ್ಷೆ, 6.84 ಲಕ್ಷ ರೂ. ದಂಡ

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸುದ್ದಿ ಸಾಂದರರ್ಭಿಕ ಚಿತ್ರ
ಮಲೆನಾಡು ಟುಡೆ ಸುದ್ದಿ ಸಾಂದರರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 24 ವರ್ಷದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಇನ್ಸ್‌ಪೆಕ್ಟರ್ (PI) ಅಶ್ವತ್ಥಗೌಡ ಅವರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ನಿಂಗನಗೌಡ ಬಿ. ಪಾಟೀಲ್ ಅವರು, ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ವಾಸ ಹಾಗೂ 6,84,000 ರೂಪಾಯಿ ದಂಡ ವಿಧಿಸಿದ್ದಾರೆ. ಅಲ್ಲದೆ, ಸಂತ್ರಸ್ತ ಬಾಲಕಿಗೆ ಆರೋಪಿಯಿಂದ ವಸೂಲಿ ಮಾಡಿದ ದಂಡದ ಹಣದಲ್ಲಿ 6,00,000 ರೂಪಾಯಿ ಹಾಗೂ ಸರ್ಕಾರದ ವತಿಯಿಂದ 4,00,000 ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor