ಶಿವಮೊಗ್ಗ ; 27 ವರ್ಷದ ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ, ಸಂತ್ರಸ್ತೆಗೆ 2 ಲಕ್ಷ ಪರಿಹಾರ, ಏನಿದು ಸುದ್ದಿ

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

Shivamogga Court Verdict ಶಿವಮೊಗ್ಗ :ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಯುವಕನಿಗೆ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಶಿವಮೊಗ್ಗ : ಖಾಸಗಿ ಹೋಟೆಲ್​ನಲ್ಲಿ ಉದ್ಯಮಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ?

ಈ ಘಟನೆಯ ವಿವರ ಗಮನಿಸುವುದಾದರೆ, ತೀರ್ಥಹಳ್ಳಿ ತಾಲೂಕಿನಲ್ಲಿ 2020ರಲ್ಲಿ 22 ವರ್ಷದ ಸಂತ್ರಸ್ತೆ ಹಾಗೂ ಆರೋಪಿಯ ನಡುವೆ ಪರಿಚಯವಾಗಿತ್ತು. ಆನಂತರ ಆರೋಪಿಯು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನನ್ವಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತೀರ್ಥಹಳ್ಳಿ ವೃತ್ತದ ಸಿಪಿಐ ಪ್ರವೀಣ್ ನೀಲಮ್ಮನವರ್ ಅವರು ಪ್ರಕರಣದ ಸುದೀರ್ಘ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು .

ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಸರ್ಕಾರದ ಪರವಾಗಿ ಅಭಿಯೋಜಕರಾದ ಶ್ರೀಧರ್ ಅವರು ವಾದ ಮಂಡಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು 27 ವರ್ಷದ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹವಾಸ ಹಾಗೂ 1,12,000 ರೂ. ದಂಡ ವಿಧಿಸಿದ್ದಾರೆ. ಜೊತೆಗೆ ಸಂತ್ರಸ್ತ ಮಹಿಳೆಗೆ 2,00,000 ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor