ಭೀಕರ ಅಪಘಾತ: ಮರಕ್ಕೆ ಡಿಕ್ಕಿಯಾಗಿ ಮೂರು ತುಂಡಾದ ಕಾರು, ಚಾಲಕ ಸಾವು

ಹಂಚಿಕೊಳ್ಳಿ
WhatsApp Facebook X Telegram
Shivamogga Crash
Shivamogga Crash

Shivamogga Crash ಶಿವಮೊಗ್ಗ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಮೂರು ತುಂಡಾದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಹೊರವಲಯದ ಬಿ.ಹೆಚ್. ರಸ್ತೆಯ ಸಕ್ಕರೆ ಕಾರ್ಖಾನೆ ಬಳಿ ನಡೆದಿದೆ.

ಶಿವಮೊಗ್ಗ ; 27 ವರ್ಷದ ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ, ಸಂತ್ರಸ್ತೆಗೆ 2 ಲಕ್ಷ ಪರಿಹಾರ, ಏನಿದು ಸುದ್ದಿ

ಶಿವಮೊಗ್ಗ ನಗರದ ಸೀಗೆಹಟ್ಟಿ ನಿವಾಸಿ, ಸುಮಾರು 21 ವರ್ಷದ ಗುರುರಾಜ್ ಮೃತ ದುರ್ದೈವಿ. ಇಂದು ಬೆಳಿಗ್ಗೆ ಇವರು ಕಾರಿನಲ್ಲಿ ಬರುತ್ತಿದ್ದಾಗ, ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ನಗರದ ಪೂರ್ವ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor