ಶಿವಮೊಗ್ಗ : ತುಂಗಾನಗರ ಪೊಲೀಸರ ಆಕ್ಷನ್! ಶ್ರೀರಾಂಪುರದ ಡ್ರೈವರ್ ಅರೆಸ್ಟ್! 6 ಲಕ್ಷದ ಮಾಲ್ ಸೀಜ್!

ಹಂಚಿಕೊಳ್ಳಿ
WhatsApp Facebook X Telegram
Shivamogga Crime News Daylight Burglar Arrested, Gold Worth 6 Lakhs Recovered

Shivamogga Crime News / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ನಗರದ ತುಂಗಾನಗರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಆತಂಕಕ್ಕೆ ಕಾರಣವಾಗಿದ್ದ ಮನೆ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಸಕ್ಸಸ್​ ಕಂಡಿದ್ದಾರೆ. ಈ ಸಂಬಂಧ, ಮನೆಗಳ ಬೀಗ ಮುರಿದು ಕಳ್ಳತನವೆಸಗುತ್ತಿದ್ದ ಆರೋಪಿಯನ್ನು ಬಂಧಿಸಿದ್ದು ಆತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು 33 ವರ್ಷದ ಪ್ರದೀಪ ಬಿ ಎಂದು ಗುರುತಿಸಲಾಗಿದೆ. ಈತ ಮೂಲತಃ ಶ್ರೀರಾಂಪುರದ ಕರುಮಾರಿಯಮ್ಮ ದೇವಸ್ಥಾನದ ಬಳಿಯ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಚಾಲಕನಾಗಿದ್ದಾನೆ.

Whatsapp / https://chat.whatsapp.com/JrsZ8He4nN600n0r3tJItz

ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಿಗೇನಹಳ್ಳಿ, ಶ್ರೀರಾಂಪುರ ಹಾಗೂ ವಾಜಪೇಯಿ ಬಡಾವಣೆಗಳಲ್ಲಿ ಹಗಲು ಹೊತ್ತಿನಲ್ಲೇ ಬೀಗ ಹಾಕಿರುವ ಮನೆಗಳಲ್ಲಿ ಕಳ್ತನ ನಡೆಯುತ್ತಿತ್ತು. ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ಆರಂಬಿಸಿದ್ದಾರೆ. ಕಳೆದ 12/06/2026 ರಂದು ತನಿಖಾ ತಂಡ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದೆ. ಈ ವೇಳೆ ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಒಟ್ಟು 06 ಮನೆ ಕಳ್ಳತನ ಪ್ರಕರಣ ಬಯಲಿಗೆ ಬಂದಿದೆ. ಇನ್ನೂ ಆರೋಪಿಯಿಂದ 6,00,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಒಂದು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ.

ಈ ಕಳ್ಳತನ ಪ್ರಕರಣಗಳ ಪತ್ತೆಗಾಗಿ (Shivamogga Crime News) ತುಂಗಾನಗರ ಪೊಲೀಸ್ ಇನ್ಸ್‌ಪೆಕ್ಟರ್ ಕೆ ಟಿ ಗುರುರಾಜ್, ಸಬ್ ಇನ್ಸ್‌ಪೆಕ್ಟರ್‌ಗಳಾದ ರಘುವೀರ ಎಂ ಹಾಗೂ ಮಂಜಮ್ಮ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ತಂಡದಲ್ಲಿ ಹೆಡ್ ಕಾನ್ಸ್‌ಟೇಬಲ್‌ಗಳಾದ ಕಿರಣ್ ಮೋರೆ, ಅರುಣ್ ಕುಮಾರ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್‌ಗಳಾದ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಹರೀಶ್ ಎಂ ಜಿ, ರಂಗನಾಥ್ ಮತ್ತು ತಮ್ಮಣ್ಣ ಜಂಬಗಿ ಅವರು ಪಾಲ್ಗೊಂಡಿದ್ದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor