ಮಲೆನಾಡು ಟುಡೆ ಸುದ್ದಿ / ಭದ್ರಾವತಿ/ ಇಲ್ಲಿನ ಜಂಕ್ಷನ್ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಟಿವಿಎಸ್ ಬೈಕ್ ಹಾಗೂ ಹೊಂಡಾ ಡಿಯೋ 110 ಮೊಪೆಡ್ ವಾಹನಗಳ ನಡುವೆ ಡಿಕ್ಕಿ ಉಂಟಾಗಿದ್ದು, ವಾಹನಗಳು ಜಖಂಗೊಂಡಿವೆ. ಅಪಘಾತದಲ್ಲಿ ಲಕ್ಕವಳ್ಳಿ ನಿವಾಸಿ ಮಂಜುನಾಥ್ ಹಾಗೂ ಮತ್ತೋರ್ವ ಯುವತಿಗೆ ತೀವ್ರ ಗಾಯಗಳಾಗಿವೆ. ಘಟನೆ ನಡೆದ ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

shivamogga crime news today
ಶಿವಮೊಗ್ಗದಲ್ಲಿ ರಾಷ್ಟ್ರ ಮಟ್ಟದ ಟಗರುಗಳ ಭರ್ಜರಿ ಕಾಳಗ: ಹೇಗಿತ್ತು ಗೊತ್ತಾ..?
ಶಿವಮೊಗ್ಗದ ಜೈಲ್ ರೋಡಿನಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ದ್ವಿಚಕ್ರ ವಾಹನ ಸವಾರರು ಕಾರಿನ ಮಾಲೀಕ ಜೊತೆ ಕ್ಯಾತೆ ತೆಗೆದು ಕಾರನ್ನ ತೆಗೆದುಕೊಂಡು ಹೋದ ಬಗ್ಗೆ ವರದಿಯಾಗಿದೆ. ಈ ಸಂಬಂಧ ಹಲ್ಲೆಗೊಳಗಾದ ಕಾರು ಮಾಲೀಕ ಜಯನಗರ ಪೊಲೀಸ್ ಠಾಣೆಯಲ್ಲಿ ಕಂಪ್ಲೆಂಟ್ ದಾಖಲಿಸಿದ್ದಾರೆ. ಜಯನಗರ ಪೊಲೀಸ್ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡು ಎನ್ಕ್ವೈರಿ ಮಾಡುತ್ತಿದ್ದಾರೆ.
ಶಿವಮೊಗ್ಗದಲ್ಲಿ ರಾಷ್ಟ್ರ ಮಟ್ಟದ ಟಗರುಗಳ ಭರ್ಜರಿ ಕಾಳಗ: ಹೇಗಿತ್ತು ಗೊತ್ತಾ..?
shivamogga crime news today
ಸಾಗರ ತಾಲ್ಲೂಕುಆನಂದಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕೊರ್ಲಿಕೊಪ್ಪ ಗ್ರಾಮದ ಬಳಿ ಎರಡು ಗುಂಪುಗಳ ನಡುವೆ ಜಗಳ ಏರ್ಪಟ್ಟಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಸ್ಥಳೀಯ ದೂರುದಾರರು ತಕ್ಷಣವೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಮುಟ್ಟಿಸಿದ್ದರು. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಗಲಾಟೆಯಲ್ಲಿ ತೊಡಗಿದ್ದವರಿಗೆ ಸೂಕ್ತ ತಿಳುವಳಿಕೆ ನೀಡಿ, ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಎಚ್ಚರಿಕೆ ನೀಡಿ ಅಲ್ಲಿಂದ ಕಳುಹಿಸಿದ್ದಾರೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
