ಶಿವಮೊಗ್ಗ : ಖಾಸಗಿ ಹೋಟೆಲ್​ನಲ್ಲಿ ಉದ್ಯಮಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ?

ಹಂಚಿಕೊಳ್ಳಿ
WhatsApp Facebook X Telegram
Shivamogga Crusher Owner Dies by Suicide in Hotel
Shivamogga Crusher Owner Dies by Suicide in Hotel

Shivamogga ಶಿವಮೊಗ್ಗ : ನಗರದ ಖಾಸಗಿ ಹೋಟೆಲ್ ಒಂದರ ಕೊಠಡಿಯಲ್ಲಿ ಕ್ರಷರ್ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. 

ಶಿವಮೊಗ್ಗ ಕಾಂಗ್ರೆಸ್​​​ಗೆ ಯುವಕರ ಭವಿಷ್ಯಕ್ಕಿಂತ ರಾಜಕೀಯವೇ ಮುಖ್ಯ : ಬಿ,ವೈ ರಾಘವೇಂದ್ರ

ಮೃತರನ್ನು ಗೋಪಾಲ ಬಡಾವಣೆ ನಿವಾಸಿ ನವೀನ್ ಕುಮಾರ್ ಅಲಿಯಾಸ್ ಬಸವರಾಜ್ (42) ಎಂದು ಗುರುತಿಸಲಾಗಿದೆ. ಹೋಟೆಲ್‌ನಲ್ಲಿ ಕೊಠಡಿ ಬಾಡಿಗೆಗೆ ಪಡೆದಿದ್ದ ಅವರು ಹೋಟೆಲ್​ ಕೊಠಡಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಐದು ವರ್ಷಗಳಿಂದಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ನವೀನ್ ಕುಮಾರ್, ಉದ್ಯಮದಲ್ಲಿ ವಿಪರೀತವಾಗಿ ಸಾಲ ಮಾಡಿಕೊಂಡಿದ್ದರೆನ್ನಲಾಗಿದೆ. ಸಾಲದ ಸುಳಿಗೆ ಸಿಲುಕಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೊಟಕ್ಕೆ ತಿಳಿದು ಬಂದಿದೆ. 

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor