ಶಿವಮೊಗ್ಗ, ಮಲೆನಾಡುಟುಡೆ ನ್ಯೂಸ್ : ಕೋಮು ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮುಂಜಾಗ್ರತಾ ಕ್ರಮವಾಗಿ, ಬಜರಂಗದಳದ ಪ್ರಮುಖ ಮುಖಂಡ ಶರಣ್ ಕುಮಾರ್ ಪಂಪ್‌ವೆಲ್ ಅವರು ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ಶರತ್ ಕುಮಾರ್ ಪಂಪ್‌ವೆಲ್ ಅವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದು, ಅವರ ಪ್ರಚೋದನಕಾರಿ ಭಾಷಣಗಳಿಂದ ಸಾರ್ವಜನಿಕ ಶಾಂತಿ ಭಂಗ ಉಂಟಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ವರದಿಯನ್ನು ಆಧರಿಸಿ ಈ ನಿರ್ಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ 2026ರ ಆಗಸ್ಟ್ 19 ರಿಂದ ಮುಂದಿನ 10 ದಿನಗಳ ಕಾಲ ಶರಣ್ ಕುಮಾರ್ ಪಂಪ್‌ವೆಲ್ ಅವರು ಶಿವಮೊಗ್ಗ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ.
