ಶಿವಮೊಗ್ಗ ಜಿಲ್ಲೆಯ ವಿವಿದೆಡೆ ಡಿಸಿ. ಡಾ.ಆರ್​.ಸೆಲ್ವಮಣಿಯವರಿಂದ ನೈಟ್ ಆಪರೇಷನ್​! ಏನಿದು?

Shivamogga DC Dr. R. Selvamani, Night rounds were conducted

ಶಿವಮೊಗ್ಗ ಜಿಲ್ಲೆಯ ವಿವಿದೆಡೆ  ಡಿಸಿ. ಡಾ.ಆರ್​.ಸೆಲ್ವಮಣಿಯವರಿಂದ ನೈಟ್ ಆಪರೇಷನ್​! ಏನಿದು?
ಶಿವಮೊಗ್ಗ ಜಿಲ್ಲೆಯ ವಿವಿದೆಡೆ ಡಿಸಿ. ಡಾ.ಆರ್​.ಸೆಲ್ವಮಣಿಯವರಿಂದ ನೈಟ್ ಆಪರೇಷನ್​! ಏನಿದು?

ಚುನಾವಣೆ ನೀತಿ ಸಂಹಿತೆ ಘೋಷಣೆಯಾದ ಬೆನ್ನಲ್ಲೆ ಜಿಲ್ಲಾಧಿಕಾರಿ ಡಾ.ಆರ್​.ಸೆಲ್ವಮಣಿ, ನಿನ್ನೆ ನೈಟ್ ರೌಂಡ್ಸ್​ ಹಾಕಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಚೆಕ್​ಪೋಸ್ಟ್​ಗಳಿಗೆ ದಿಢೀರ್ ಭೇಟಿಕೊಟ್ಟ ಸೆಲ್ವಮಣಿಯವರು, ಅಲ್ಲಿನ ಸಿಬ್ಬಂದಿಯ ಕೆಲಸವನ್ನು ಪರಿಶೀಲಿಸಿದರು. ಅಲ್ಲದೆ, ಖುದ್ದು ವಾಹನಗಳ ತಪಾಸಣೆ ನಡೆಸಿದ್ರು. 

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಚೆಕ್​ಪೋಸ್ಟ್ , ಸುತ್ತುಕೋಟೆಯ ಚೆಕ್​ ಪೋಸ್ಟ್​ ಸೇರಿದಂತೆ ವಿವಿಧ ಚೆಕ್​ಪೋಸ್ಟ್​ಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳ ತಂಡ, ಪರಿಶೀಲನೆ ನಡೆಸಿ ಚುನಾವಣಾ ನೀತಿ ಸಂಹಿತೆಯ ಬಗ್ಗೆ ವಾಹನ ಸವಾರರಿಗೂ ಮಾಹಿತಿ ನೀಡಿದೆ. 

ಮತದಾರರಿಗೆ ಆಮಿಷ ಅಕ್ಷಮ್ಯ ಅಪರಾಧ

ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನಗ, ನಗದು ಇನ್ನಿತರ ಸಾಮಾಗ್ರಿಗಳನ್ನು ನೀಡಿ ಆಮಿಷ ಒಡ್ಡುವುದು ಹಾಗೂ ಅದನ್ನು ಪಡೆಯುವುದು ಅಪರಾಧವಾಗಿದ್ದು, ಅಂತಹ ಕೃತ್ಯಗಳು ಕಾನೂನು ಪ್ರಕಾರ ಶಿಕ್ಷಾರ್ಹವಾಗಿದೆ ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಮತದಾರರಿಗೆ ಆಮಿಷ ಒಡ್ಡಲು ಯಾವುದೇ ರೀತಿಯಲ್ಲಿ ಹಣ ವರ್ಗಾಯಿಸುವುದು, ವಿವಿಧ ಸಾಧನ ಸಾಮಾಗ್ರಿಗಳ ವಿತರಣೆ, ಗಿಫ್ಟ್ ಓಚರ್‌ಗಳು, ಸಿಮ್ ಕಾರ್ಡ್ ಬ್ಯಾಲೆನ್ಸ್, ಪ್ರವಾಸಕ್ಕೆ ಏರ್ಪಾಡು ಮಾಡುವುದು, ಆಹಾರ ಪದಾರ್ಥಗಳ ವಿತರಣೆ, ಮದ್ಯ ಮತ್ತಿತರ ಪಾನೀಯಗಳ ವಿತರಣೆ, ವಾಹನಗಳಿಗೆ ಯಾವುದೇ ರೀತಿಯಲ್ಲಿ ಇಂಧನ ಭರಿಸುವುದು ಐಪಿಸಿ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ 1951 ಅಡಿ ಶಿಕ್ಷಾರ್ಹ ಅಪರಾಧವಾಗಿದೆ. 

ಎಷ್ಟು ದುಡ್ಡು ಇಟ್ಟುಕೊಂಡು ಓಡಾಡಬಹುದು

ಜನರು ಸೂಕ್ತ ದಾಖಲೆ ಅಥವಾ ಸಮಜಾಯಿಷಿಕೆ ಇಲ್ಲದೆ  50ಸಾವಿರ ರೂ. ಗಿಂತ ಅಧಿಕ ನಗದನ್ನು ಕೊಂಡೊಯ್ಯಬಾರದು. ಯಾವುದೇ ಸಾಧನ, ಸಾಮಾಗ್ರಿಗಳನ್ನು ಸೂಕ್ತ ದಾಖಲೆಗಳಿಲ್ಲದೆ ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿಡುವುದು ಅಥವಾ ಸಾಗಾಟ ಮಾಡಬಾರದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಜಾಹೀರಾತು ನಿರ್ಬಂಧ:

ಚುನಾವಣಾ ಸಂದರ್ಭದಲ್ಲಿ ಯಾವುದೇ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಅಥವಾ ಸಾರ್ವಜನಿಕರಿಗೆ ಕಾಣಿಸುವ ರೀತಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿಯಿಲ್ಲದೆ ಜಾಹೀರಾತುಗಳನ್ನು ಪ್ರಚುರಪಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

BREAKING / ಶಿವಮೊಗ್ಗ ನಗರ ಕ್ಷೇತ್ರದ 11 ಜನ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿಗೆ ದಿಢೀರ್​ ದೌಡು!/ ಕಾರಣವೇನು? ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೇಕೆ?

ಮುದ್ರಣ ನಿರ್ಬಂಧ:

ಚುನಾವಣಾ ಸಂದರ್ಭದಲ್ಲಿ ಯಾವುದೇ ಚುನಾವಣಾ ಕರಪತ್ರ, ಪ್ಲೆಕಾರ್ಡ್, ಬ್ಯಾನರ್, ಬಂಟಿAಗ್ಸ್, ಫೆಕ್ಸ್, ಪೋಸ್ಟರ್ ಇತ್ಯಾದಿಗಳನ್ನು ಮುದ್ರಿಸುವ ಸಂದರ್ಭದಲ್ಲಿ ಅದರಲ್ಲಿ ಮುದ್ರಕರ ಹೆಸರು, ವಿಳಾಸ, ಮುದ್ರಣ ಸಂಖ್ಯೆ ಇತ್ಯಾದಿ ವಿವರಗಳನ್ನು ಕಡ್ಡಾಯವಾಗಿ ನಮೂದಿಸಿರಬೇಕು ಎಂದು ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

ಮುದ್ರಣ ಕುರಿತಾಗಿ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ 3ದಿನಗಳ ಒಳಗಾಗಿ ಹಾಗೂ ಸಾಮಾಗ್ರಿಯ ಪ್ರತಿಯನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿ ಕಚೇರಿಗೆ ಒದಗಿಸಬೇಕು. ಇದರ ಉಲ್ಲಂಘನೆ ಪ್ರಜಾಪ್ರತಿನಿಧಿ ಕಾಯ್ದೆ 1951 ರ 127 (ಎ) ಉಲ್ಲಂಘನೆಯಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

*ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನ/ 2 ತಿಂಗಳಿನಲ್ಲಿ 41,23,920 ರೂಪಾಯಿ ಆದಾಯ!*

ಪೂರ್ವಾನುಮತಿ ಕಡ್ಡಾಯ:

ಚುನಾವಣಾ ಜಾಹೀರಾತುಗಳನ್ನು ಕೇಬಲ್ ನೆಟ್‌ವರ್ಕ್ ಅಥವಾ ಟಿವಿ ಚಾನೆಲ್‌ಗಳಲ್ಲಿ ಪ್ರಸಾರ ಮಾಡುವ ಪೂರ್ವದಲ್ಲಿ ಕಡ್ಡಾಯವಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮತಿಯನ್ನು ಪಡೆದಿರಬೇಕು ಎಂದು ಜಿಲ್ಲಾಧಿಕಾರಿ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಸುಗಮ ಮತ್ತು ನ್ಯಾಯಯುತ ಚುನಾವಣಾ ಪ್ರಕ್ರಿಯೆಗಾಗಿ ಈಗಾಗಲೇ ಸ್ಟಾಟಿಕ್ ಸರ್ವೆಯಲೆನ್ಸ್ ತಂಡಗಳು, ವಿಡಿಯೋ ವೀಕ್ಷಣಾ ತಂಡಗಳು ಹಾಗೂ ಫ್ಲಯಿಂಗ್ ಸ್ಕಾ÷್ವಡ್‌ಗಳನ್ನು ರಚಿಸಲಾಗಿದೆ. ಮುಕ್ತ, ಪಾರದರ್ಶಕ ಹಾಗೂ ಶಾಂತಿಯುತವಾಗಿ ಚುನಾವಣೆ ನಡೆಸಲು ಸಾರ್ವಜನಿಕರು ಸಹಕಾರ ನೀಡುವಂತೆ ಅವರು ಕೋರಿದ್ದಾರೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

MALENADUTODAY.COM/ SHIVAMOGGA / KARNATAKA WEB NEWS

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, Ullur, Sagar Taluk News,