ಶಿವಮೊಗ್ಗ ಡಿ,ಸಿ ಹೆಸರಿಂದ ನಿಮ್ಗೆ ಮೆಸೇಜ್‌ ಬರ್ತಿದಿಯಾ, ಹಾಗಾದ್ರೆ ಈ ಸುದ್ದಿ ಓದಿ

ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ವಂಚಿಸುತ್ತಿದ್ದ ಸೈಬರ್ ಕಳ್ಳರು, ಇದೀಗ ಉನ್ನತ ಅಧಿಕಾರಿಗಳ ಹೆಸರನ್ನು ಬಳಸಿಕೊಳ್ಳಲು ಆರಂಭಿಸಿದ್ದಾರೆ. ಶಿವಮೊಗ್ಗ  ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರ ಹೆಸರಿನಲ್ಲಿಯೂ ಇಂತಹದ್ದೇ ಒಂದು ವಂಚನೆಯ ಜಾಲ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದ್ದು, ಈ ಕುರಿತು ಜಿಲ್ಲಾಧಿಕಾರಿಗಳೇ ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ಜನರಿಗೆ ಜಾಗರೂಕರಾಗಿರುವಂತೆ ಸೂಚಿಸಿದ್ದಾರೆ.

ಶಿವಮೊಗ್ಗ:  ಬಾಗಿಲು ಒಡೆದು ಒಳ ನುಗ್ಗಿದ ಅಕ್ಕ ಪಡೆ, ಉಳಿಯಿತು ವಿದ್ಯಾರ್ಥಿನಿ ಜೀವ 

ಜಿಲ್ಲಾಧಿಕಾರಿಗಳ ಹೆಸರು ಮತ್ತು ಅವರ ಅಧಿಕೃತ ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಂಡಿರುವ ಸೈಬರ್ ವಂಚಕರು, +84 56 455 2858 ಎಂಬ ವಿದೇಶಿ ವಾಟ್ಸಾಪ್ ಸಂಖ್ಯೆಯ ಮೂಲಕ ಸಾರ್ವಜನಿಕರಿಗೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿಗೆ ನಕಲಿ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಜಿಲ್ಲಾಧಿಕಾರಿಗಳು, ಆ ನಕಲಿ ಸಂದೇಶದ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಳ್ಳುವ ಮೂಲಕ ಅದರ ಸತ್ಯಾಸತ್ಯತೆಯನ್ನು ಸ್ಪಷ್ಟಪಡಿಸಿದ್ದಾರೆ.

 Shivamogga DC Name Misused Cyber Fraud Alert
Shivamogga DC Name Misused Cyber Fraud Alert

ಈ ವಿದೇಶಿ ಸಂಖ್ಯೆಯಿಂದ ಬರುತ್ತಿರುವ ಸಂದೇಶಗಳು ಸಂಪೂರ್ಣವಾಗಿ ಸೈಬರ್ ವಂಚಕರ ಕೃತ್ಯವಾಗಿದ್ದು, ಸಾರ್ವಜನಿಕರು ಹಾಗೂ ಸರ್ಕಾರಿ ಸಿಬ್ಬಂದಿಗಳು ಇಂತಹ ಸಂದೇಶಗಳಿಗೆ ಯಾವುದೇ ಕಾರಣಕ್ಕೂ ಪ್ರತಿಕ್ರಿಯಿಸಬಾರದು ಎಂದು ಅವರು ಮನವಿ ಮಾಡಿದ್ದಾರೆ. ಒಂದು ವೇಳೆ ಇಂತಹ ನಕಲಿ ವಾಟ್ಸಾಪ್ ಸಂಖ್ಯೆಗಳಿಂದ ಹಣದ ಬೇಡಿಕೆ ಬಂದಲ್ಲಿ ಅಥವಾ ಯಾವುದಾದರೂ ಸಹಾಯ ಕೋರಿ ಸಂದೇಶಗಳು ಸ್ವೀಕೃತವಾದಲ್ಲಿ, ಅವುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಬೇಕು ಮತ್ತು ಕೂಡಲೇ ಅಂತಹ ಸಂಖ್ಯೆಗಳನ್ನು ಬ್ಲಾಕ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು  ಸೂಚನೆ ನೀಡಿದ್ದಾರೆ.

 Shivamogga DC Name Misused Cyber Fraud Alert

 

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು