shivamogga dcc bank case status / ಜಾಮೀನಿಗಾಗಿ ಆರ್​ಎಂ ಮಂಜುನಾಥ್​ ಅರ್ಜಿ! ಇಡಿಗೆ ಹೈಕೋರ್ಟ್​ 1st ನೋಟಿಸ್

ಹಂಚಿಕೊಳ್ಳಿ
WhatsApp Facebook X Telegram
shivamogga dcc bank case status rm manjunath gowda
rm manjunath gowda

shivamogga dcc bank case status ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣದಲ್ಲಿ ಅಧ್ಯಕ್ಷ ಆರ್​ಎಂ ಮಂಜುನಾಥ್​ ಗೌಡರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.  ಡಿಸಿಸಿ ಬ್ಯಾಂಕ್ನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ, Prevention of Money Laundering Act (PMLA) ಅಡಿಯಲ್ಲಿ ಬಂಧಿತರಾಗಿರುವ ಬ್ಯಾಂಕಿನ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಮಂಗಳವಾರ (ಮೇ 28) ಜಾರಿ ನಿರ್ದೇಶನಾಲಯಕ್ಕೆ (ED) ನೋಟಿಸ್ ಜಾರಿ ಮಾಡಿದೆ.  ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ರಜಾ ಪೀಠವು ಮಂಜುನಾಥಗೌಡರ ಅರ್ಜಿಯನ್ನು ಪರಿಗಣಿಸಿ, EDಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 5ಕ್ಕೆ ಮುಂದೂಡಲಾಗಿದೆ.  

 shivamogga dcc bank case status
rm manjunath gowda

shivamogga dcc bank case status

2014ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಗಾಂಧಿ ಬಜಾರ್ ಶಾಖೆಯಲ್ಲಿ 62.77 ಕೋಟಿ ರೂಪಾಯಿಗಳ ಬಂಗಾರ ಅಡಮಾನ ಸಾಲ ವಂಚನೆ ಬಯಲಾಗಿತ್ತು. ಈ ಪ್ರಕರಣದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮೊದಲ ದೂರು ದಾಖಲಾಗಿತ್ತು. ತನಿಖೆಯ ನಂತರ, 2014ರ ಅಕ್ಟೋಬರ್ 18ರಂದು ಪೊಲೀಸರು ನ್ಯಾಯಾಲಯಕ್ಕೆ ಜಾರ್ಜ್​ಶೀಟ್​ ಸಲ್ಲಿಸಿದ್ದರು. 1997ರಿಂದ 2020ರವರೆಗೆ ಬ್ಯಾಂಕ್ ಅಧ್ಯಕ್ಷರಾಗಿದ್ದ ಮಂಜುನಾಥಗೌಡರ ವಿರುದ್ಧ ED 2023ರ ಅಕ್ಟೋಬರ್ 6ರಂದು ಸಮನ್ಸ್ ಜಾರಿ ಮಾಡಿತ್ತು.  

 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor