ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ನಾರಾಯಣ ಹೆಗೆಡೆ ಅಧಿಕಾರ ಸ್ವೀಕಾರ! ಇವರ ಬಗ್ಗೆ ಇಲ್ಲಿದೆ ಮಾಹಿತಿ

ಹಂಚಿಕೊಳ್ಳಿ
WhatsApp Facebook X Telegram

Shivamogga | Feb 1, 2024 | Shivamogga Deputy Commissioner Gurudatta Narayan Hegde |   ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ ನಾರಾಯಣ ಹೆಗಡೆ ಅವರು ನಿನ್ನೆ ಬುಧವಾರ ಅಧಿಕಾರ ವಹಿಸಿಕೊಂಡರು.

ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗೆಡೆ

ವರ್ಗಾವಣೆ ಆದೇಶ ಹೊರಬಿದ್ದು 2 ದಿನಗಳ ನಂತರ ನೂತನ ಜಿಲ್ಲಾಧಿಕಾರಿಗಳು ಶಿವಮೊಗ್ಗ ಡಿ.ಸಿ.ಯಾಗಿ ಅಧಿಕಾರ ಸ್ವೀಕರಿಸಿ ಕಚೇರಿಯ ಎಲ್ಲಾ ವಿಭಾಗಕ್ಕೂ ಭೇಟಿ ನೀಡಿ ಸಿಬ್ಬಂದಿಗಳಿಂದ ಮಾಹಿತಿ ಪಡೆದಿದ್ದಾರೆ. ಈ ವೇಳೆ  ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರ ಗಳಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. 

ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಶಿವಲಿಂಗಪ್ಪ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್, ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಮತ್ತಿತರರು ಜಿಲ್ಲಾಧಿಕಾರಿಗಳಿಗೆ ಶುಭ ಕೋರಿದರು.

ನೂತನ ಜಿಲ್ಲಾಧಿಕಾರಿ ಗುರುದತ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಹೊನ್ನೆಗದ್ದೆ ಗ್ರಾಮದವರು. ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಧಾರವಾಡದ ಕೆ ಇ ಬೋರ್ಡ್ ಶಾಲೆಯಲ್ಲಿ ಮಾಡಿದ್ದಾರೆ. ಪಿಯು ಶಿಕ್ಷಣವನ್ನು ಸಹ ಧಾರವಾಡದಲ್ಲಿಯೇ ಪೂರೈಸಿದ್ದಾರೆ.

ಬೆಂಗಳೂರಿನ ಆರ್. ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಬಳಿಕ 2014ರಲ್ಲಿ ಕೇಂದ್ರ ಲೋಕಸೇವಾ ಆಯೋಗ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾಗಿದ್ದರು.


ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor