ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಜಿಲ್ಲೆಯಲ್ಲಿ ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ದಿ:14/09/2026 ರಿಂದ ದಿ:13/10/2026 ರವರೆಗೆ 30 ದಿನಗಳ ಕಾಲ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದುಗಳನ್ನು ಸಿಡಿಸುವುದನ್ನು ಮತ್ತು ಬೈಕ್ ರ‍್ಯಾಲಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ಸೆ.14 ರಂದು ಜಿಲ್ಲಾದ್ಯಂತ ಗಣೇಶ ಹಬ್ಬ ನಡೆಯಲಿದ್ದು, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿರುತ್ತವೆ.
ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರ ಶಿಫಾರಸಿನಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35, 36 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾದ್ಯಂತ ಸೆ. 14 ರಿಂದ ಅ.13 ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.
