ಶಿವಮೊಗ್ಗ : 50 ಸಾವಿರ ಮೌಲ್ಯದ ಗಾಂಜಾ ಸಮೇತ ವ್ಯಕ್ತಿಯ ಬಂಧನ

ಹಂಚಿಕೊಳ್ಳಿ
WhatsApp Facebook X Telegram
Shivamogga Drug Bust
Shivamogga Drug Bust

ಮಲೆನಾಡು ಟುಡೇ ನ್ಯೂಸ್ / ಶಿವಮೊಗ್ಗ: ಬುದ್ಧ ನಗರದಿಂದ ಮಂಜುನಾಥ ಬಡಾವಣೆಗೆ ತೆರಳುವ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಕಿರಣ್ ಎಂಬ ಆರೋಪಿಯನ್ನು  ದೊಡ್ಡ ಪೇಟೆ ಪೊಲೀಸರು ಬಂಧಿಸಿದ್ದಾರೆ

ಘಟನೆಯ ವಿವರ

ಬದ್ಧನಗರ ರಸ್ತೆಯ ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಪೂರೈಕೆಯಾಗುತ್ತಿರುವ ಬಗ್ಗೆ ದೊಡ್ಡಪೇಟೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಆರೋಪಿ ಕಿರಣ್‌ನಿಂದ ಸುಮಾರು 50,000 ರೂಪಾಯಿ ಮೌಲ್ಯದ 1 ಕೆಜಿ 98 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಕಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor