ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ನಗರದ ದುರ್ಗಿಗುಡಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಆಂಗ್ಲಮಾಧ್ಯಮ ಶಾಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ವಿದ್ಯಾರ್ಥಿ ದತ್ತಾಂಶ ನಿರ್ವಹಣಾ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭದ್ರತಾ ಸಿಬ್ಬಂದಿ ಹುದ್ದೆಗೆ ಇಲಾಖೆಯ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸುವ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.
ವಿದ್ಯಾರ್ಥಿ ದತ್ತಾಂಶ ನಿರ್ವಹಣಾ ಸಹಾಯಕ ಹುದ್ದೆಗೆ ಯಾವುದೇ ಪದವಿ ಹೊಂದಿರುವುದರ ಜತೆಗೆ ಕಂಪ್ಯೂಟರ್ ಕೋರ್ಸ್ ಪ್ರಮಾಣಪತ್ರ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬಿ.ಎಸ್ಸಿ. ಕಂಪ್ಯೂಟರ್ ಸೈನ್ಸ್ ಅಥವಾ ಬಿಸಿಎ ಪದವೀಧರರಿಗೆ ಆದ್ಯತೆ ನೀಡಲಾಗುವುದು.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಜಿಟಲ್ ನಿರ್ವಹಣೆ, ದತ್ತಾಂಶ ನಿರ್ವಹಣೆ, ಎಂಎಸ್ ಆಫೀಸ್, ಸ್ಪ್ರೆಡ್‌ಶೀಟ್ ಹಾಗೂ ಆನ್‌ಲೈನ್ ಪೋರ್ಟಲ್ ಬಳಕೆಯ ಕುರಿತು ಮೂಲ ಜ್ಞಾನ ಹೊಂದಿರಬೇಕು ಎಂದು ತಿಳಿಸಲಾಗಿದೆ.
ಭದ್ರತಾ ಸಿಬ್ಬಂದಿ ಹಾಗೂ ವಿದ್ಯಾರ್ಥಿ ದತ್ತಾಂಶ ನಿರ್ವಹಣಾ ಸಹಾಯಕ ಎರಡೂ ಹುದ್ದೆಗಳಿಗೆ ತಲಾ ತಿಂಗಳಿಗೆ ₹10,000 ಗೌರವಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 18 ಕೊನೆಯ ದಿನ ಎಂದು ಶಾಲೆಯ ಮುಖ್ಯ ಶಿಕ್ಷಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9902182980 ಸಂಪರ್ಕಿಸಬಹುದು.
