ಶಿವಮೊಗ್ಗ : ಮಿಸ್ ಆಗಿ ಮೆಸೇಜ್‌ಗೆ ಓಕೆ ಕೊಟ್ಟ ಇಂಜಿನಿಯರ್ ಕಳೆದುಕೊಂಡಿದ್ದು 1.4 ಲಕ್ಷ!

ಹಂಚಿಕೊಳ್ಳಿ
WhatsApp Facebook X Telegram
CEN police station ಶಿವಮೊಗ್ಗ
CEN police station ಶಿವಮೊಗ್ಗ

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಶಿವಮೊಗ್ಗದ ಇಂಜಿನಿಯರ್ ಒಬ್ಬರ ವೈಯಕ್ತಿಕ ಬ್ಯಾಂಕ್ ಖಾತೆಯ ಮಾಹಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು ಮನೆಯಲ್ಲಿದ್ದಾಗ ಅಪರಿಚಿತ ನಂಬರ್‌ನಿಂದ ಅವರಿಗೆ ಫೋನ್ ಕರೆಯೊಂದು ಬಂದಿದೆ. ಅದನ್ನು ಸ್ವೀಕರಿಸಿದಾಗ, ನಿಮ್ಮ ರಿವಾರ್ಡ್ ಪಾಯಿಂಟ್ಸ್ ಇದೆ, ಅದನ್ನು ಕ್ಯಾಶ್ ಆಗಿ ಅಕೌಂಟ್‌ಗೆ ಟ್ರಾನ್ಸ್‌ಫರ್ ಮಾಡುತ್ತೇವೆ ಎಂದು ಹೇಳಿ ನಂಬಿಸಲು ಯತ್ನಿಸಿದ್ದಾರೆ. ಅದಕ್ಕೆ ದೂರುದಾರರು ಬೇಡ ಎಂದು ಹೇಳಿ ಫೋನ್ ಕಟ್ ಮಾಡಿದ್ದಾರೆ.

ನಂತರ ದೂರುದಾರರಿಗೆ ಬ್ಯಾಂಕ್‌ನಿಂದ ಟ್ರಾನ್ಸಾಕ್ಷನ್ ಅಲರ್ಟ್ ಮೆಸೇಜ್ ಬಂದಾಗ, ದೂರುದಾರರು ಗೊತ್ತಾಗದೆ ಅದಕ್ಕೆ ಒಪ್ಪಿಗೆ ನೀಡಿದ್ದಾರೆ. ಪರಿಣಾಮವಾಗಿ ಒಟ್ಟು ಹಂತ ಹಂತವಾಗಿ 1,40,829 ರೂಪಾಯಿ ಹಣ ಕಡಿತಗೊಂಡಿರುವ ಮೆಸೇಜ್ ಬಂದಿದೆ. ಇದನ್ನು ನೋಡಿ ಶಾಕ್ ಆದ ಇಂಜಿನಿಯರ್ ಬ್ಯಾಂಕ್‌ಗೆ ಹೋಗಿ ವಿಚಾರಿಸಿದಾಗ, ಯಾರೋ ಅಪರಿಚಿತ ವ್ಯಕ್ತಿ ದೂರುದಾರರ ವೈಯಕ್ತಿಕ ಮಾಹಿತಿಯನ್ನು ಬಳಸಿಕೊಂಡು ಅವರ ಗಮನಕ್ಕೆ ಬಾರದೇ ಕ್ರೆಡಿಟ್ ಕಾರ್ಡ್‌ನಿಂದ ಹಣವನ್ನು ಮೋಸದಿಂದ ವರ್ಗಾವಣೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸುವಂತೆ ದೂರುದಾರರು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor