ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಶಿವಮೊಗ್ಗದ ಲಕ್ಷ್ಮೀ ಟಾಕೀಸ್, ಗಾಂಧಿ ಬಜಾರ್ನಲ್ಲಿ ಇಷ್ಟು ದಿನ ಬಿರುಸಿನಿಂದ ನಡೆಯುತ್ತಿದ್ದ ಫುಟ್ಪಾತ್ ತೆರವು ಕಾರ್ಯಾಚರಣೆ ಇದೀಗ ಶಿವಮೊಗ್ಗ ಬೈಪಾಸ್ ರಸ್ತೆಗೆ ಎಂಟ್ರಿಕೊಟ್ಟಿದೆ. ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್ರವರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ, ಪೊಲೀಸ್ ಸಿಬ್ಬಂದಿಗಳು ವಾಹನ ಸವಾರರು ಹಾಗೂ ಪಾದಚಾರಿಗಳ ಸಂಚಾರಕ್ಕೆ ತೊಂದರೆ ಉಂಟುಮಾಡುತ್ತಿದ್ದ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ.
ಕಳೆದ ಅನೇಕ ದಿನಗಳಿಂದ ಫುಟ್ಪಾತ್ ಅನ್ನು ಅಕ್ರಮವಾಗಿ ಆಕ್ರಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದವರಿಗೆ ಪೊಲೀಸರು ಎಚ್ಚರಿಕೆಯನ್ನು ನೀಡುತ್ತಾ, ಕೆಲವೆಡೆ ಅಂಗಡಿಗಳನ್ನು ತೆರವುಗೊಳಿಸುವ ಕೆಲಸವನ್ನು ಸಹ ಮಾಡುತ್ತಿದ್ದಾರೆ. ಅದರಂತೆ ಇವತ್ತು ಶಿವಮೊಗ್ಗದ ಬೈಪಾಸ್ ಹಾಗೂ ನ್ಯೂ ಮಂಡ್ಲಿಗೆ ಎಂಟ್ರಿಕೊಟ್ಟ ಪೊಲೀಸರು, ಅಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಜೆಸಿಬಿ ಮೂಲಕ ಅಕ್ರಮವಾಗಿ ನಿರ್ಮಿಸಿದ ಶೆಡ್ಗಳನ್ನು ತೆರವುಗೊಳಿಸಿರುವ ಪೊಲೀಸರು, ಫುಟ್ಪಾತ್ನಲ್ಲಿ ಬ್ಯಾರಿಕೇಡ್ಗಳನ್ನು ನಿರ್ಮಿಸಿ ಮಾರ್ಕ್ ಮಾಡುವ ಮೂಲಕ ಈ ಪ್ರದೇಶಗಳಲ್ಲಿ ವ್ಯಾಪಾರ ಮಾಡಬಾರದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ಸವಾರರು ಹಾಗೆಯೇ ಪಾದಚಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪೊಲೀಸರು ಕೈಗೊಂಡಿರುವ ಈ ಒತ್ತುವರಿ ತೆರವು ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
