ಮಲೆನಾಡು ಸುದ್ದಿ / ಶಿವಮೊಗ್ಗ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಫಲಾನುಭವಿಯಾಗಿ ನೋಂದಾಯಿತರಾಗಿರುವ ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಂಡಳಿಯಿಂದ ಸುರಕ್ಷತಾ ಕಿಟ್ಗಳನ್ನು ವಿತರಿಸಲಾಗುತ್ತಿದ್ದು, ಅರ್ಹ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈವರೆಗೆ ಸುರಕ್ಷತಾ ಕಿಟ್ ಪಡೆಯದಿರುವ ಮೇಷನ್, ಎಲೆಕ್ಟ್ರೀಷಿಯನ್, ವೆಲ್ಡರ್, ಕಾರ್ಪೆಂಟರ್, ಪೇಂಟಿಂಗ್ ಹಾಗೂ ಪ್ಲಂಬಿಂಗ್ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ನೋಂದಾಯಿತ ಫಲಾನುಭವಿಗಳಿಗೆ ಈ ಕಿಟ್ಗಳನ್ನು ನೀಡಲಾಗುತ್ತಿದೆ. ಅರ್ಹ ಕಾರ್ಮಿಕರು ತಮ್ಮ ತಾಲ್ಲೂಕಿನ ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗಿದೆ.
ಸಲ್ಲಿಸಬೇಕಾದ ದಾಖಲೆಗಳು:
ಚಾಲ್ತಿಯಲ್ಲಿರುವ ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ
ಫಲಾನುಭವಿಯ ಆಧಾರ್ ಕಾರ್ಡ್
ಈಗಾಗಲೇ ಸುರಕ್ಷತಾ ಕಿಟ್ ಪಡೆದಿರುವುದಿಲ್ಲವೆಂಬ ಬಗ್ಗೆ ಸ್ವಯಂ ದೃಢೀಕರಣ ಪತ್ರ
ದಾಖಲೆಗಳನ್ನು ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ ಎಂದು ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
