ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ ಗಾಂಧಿಬಜಾರ್ನಲ್ಲಿ ಫುಟ್ಪಾತ್ ವ್ಯಾಪಾರಿಗಳು ಹಾಗೂ ತಳ್ಳುಗಾಡಿಗಳಿಂದ ಅಂಗಡಿ ವ್ಯಾಪಾರಕ್ಕೆ ತೊಂದರೆಯಾಗುತ್ತಿದ್ದು, ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ ಗಾಂಧಿಬಜಾರ್ನಲ್ಲಿ ಫುಟ್ಪಾತ್ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಗಾಂಧಿಬಜಾರ್ ವರ್ತಕರ ಸಂಘ ಜಿಲ್ಲಾಡಳಿತಕ್ಕೆ ಒತ್ತಾಯಿಸಿದೆ.
ಶಿವಮೊಗ್ಗದ ಗಾಂಧಿಬಜಾರ್ನಲ್ಲಿ ಪುಟ್ ಪಾತ್ ವ್ಯಾಪಾರ ನಿಲ್ಲಿಸಿ
ಈ ಕುರಿತು ಮನವಿ ಸಲ್ಲಿಸಿರುವ ಸಂಘದ ಅಧ್ಯಕ್ಷ ವಿಜಯಕುಮಾರ್ ದಿನಕರ್, ಈ ಹಿಂದೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿ ಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರ ಸಭೆಯಲ್ಲಿ ಗಾಂಧಿ ಬಜಾರ್ನಲ್ಲಿ ಫುಟ್ಪಾತ್ ವ್ಯಾಪಾರ ಮತ್ತು ತಳ್ಳುಗಾಡಿಗಳಿಗೆ ಅವಕಾಶ ನೀಡದಿರಲು ನಿರ್ಧರಿಸಿ, ಪರ್ಯಾಯ ಸ್ಥಳಗಳನ್ನು ಗುರುತಿಸಲಾಗಿತ್ತು. ಆದರೆ, ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಮೂರು ದಿನ ಮುಂಚಿತ ವಾಗಿ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ದೂರಿದ್ದಾರೆ.
ಇದರಿಂದ ಅಂಗಡಿಗಳ ಮುಂದೆ ವ್ಯಾಪಾರ ನಡೆಸುವುದರಿಂದ ಗ್ರಾಹಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಸಂಚಾರ ದಟ್ಟಣೆ ಹೆಚ್ಚುವುದರ ಜತೆಗೆ ಅಂಗಡಿ ಮಾಲೀಕರೊಂದಿಗೆ ವಾಗ್ವಾದವೂ ನಡೆಯು ತ್ತಿದೆ. ಹಬ್ಬದ ಸಂದರ್ಭದಲ್ಲಿ ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ, ಬಾಡಿಗೆ ಹಾಗೂ ತೆರಿಗೆ ಪಾವತಿಸುವ ವರ್ತಕರು ವ್ಯಾಪಾರವಿಲ್ಲದೆ ನಷ್ಟ ಅನುಭವಿಸುವಂತಾಗಿದೆ ಎಂದು ತಿಳಿಸಿದ್ದಾರೆ.
ಫುಟ್ಪಾತ್ ವ್ಯಾಪಾರಿಗಳು ಹಾಗೂ ತಳ್ಳುಗಾಡಿಗಳಿಗೆ ಗಾಂಧಿ ಬಜಾರ್ನಲ್ಲಿ ಅವಕಾಶ ನೀಡದೆ, ಅವರಿಗೆ ಸೂಕ್ತ ಪರ್ಯಾಯ ಸ್ಥಳ ಕಲ್ಪಿಸಬೇಕು. ಇಲ್ಲವಾದಲ್ಲಿ ವರ್ತಕರು ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
