ತುಂಗಾ ಮೇಲ್ದಂಡೆ ಚಾನಲ್ ಹತ್ತಿರ ವಸೀಂ,ನದೀಮ್​ ಸೇರಿ ಐವರ ಬಂಧನ! ತುಂಗಾ ನಗರ ಪೊಲೀಸರ ಕಾರ್ಯಾಚರಣೆ

ಹಂಚಿಕೊಳ್ಳಿ
WhatsApp Facebook X Telegram
Shivamogga Ganja Seizure Five Arrested, 1.23 Kg Cannabis Seized
Shivamogga Ganja Seizure Five Arrested, 1.23 Kg Cannabis Seized

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ ಠಾಣೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹61,500 ಮೌಲ್ಯದ 1 ಕೆಜಿ 230 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ವಸೀಂ ಅಕ್ರಮ್ (24), ನದೀಮ್ (21), ನಾಸೀರ್ ಶೇಖ್ (20), ಹರ್ಷದ್ ವುಲ್ಲಾ (21) ಹಾಗೂ ಶಾಹೀದ್ ಖಾನ್ (26) ಬಂಧಿತ ಆರೋಪಿಗಳು.

ತುಂಗಾ ನಗರ ಪೊಲೀಸರ ಕಾರ್ಯಾಚರಣೆ

ಶಿವಮೊಗ್ಗ–ಹಾಳೂರು ಅನುಪಿನಕಟ್ಟೆ ಮುಖ್ಯರಸ್ತೆಯ ತುಂಗಾ ಮೇಲ್ದಂಡೆ ಚಾನಲ್ ಸಮೀಪ ಗಾಂಜಾ ಮಾರಾಟ ನಡೆಯುತ್ತಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿ ಆಧರಿಸಿ ತುಂಗಾನಗರ ಪೊಲೀಸ್ ಠಾಣೆಯ ಪಿಎಸ್‌ಐ ಎಂ. ರಘುವೀರ್ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ.ದಾಳಿ ಸಂದರ್ಭದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆರೋಪದಡಿ ಐವರನ್ನು ಬಂಧಿಸಲಾಗಿದ್ದು, ಅವರಿಂದ 1 ಕೆಜಿ 230 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾದ ಮೌಲ್ಯ ₹61,500 ಎಂದು ಪೊಲೀಸ್ ಇಲಾಖೆ ಮಲೆನಾಡು ಟುಡೆಗೆ ನೀಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor