ಉದ್ಯೋಗ ಮೇಳ, ಉಚಿತ ತರಬೇತಿ, ಜನ ಭಾಗೀದಾರಿ ಅಭಿಯಾನ ಸೇರಿದಂತೆ ಅಗತ್ಯ ಸರ್ಕಾರಿ ಪ್ರಕಟಣೆಗಳು ನಾಗರಿಕರ ಗಮನಕ್ಕೆ Shivamogga Govt Announcements

ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅಗತ್ಯವಿರುವ ಹಾಗೂ ಉಪಯುಕ್ತ ಮಾಹಿತಿಯನ್ನು ಸಂಪೂರ್ಣ ವಿವರದ ಜೊತೆಗೆ ಇಲ್ಲಿ ನೀಡಲಾಗಿದೆ. ವಿವಿಧ ಇಲಾಖೆ ಹಾಗೂ ವಿವಿಧ ಇಲಾಖೆಗಳಿಂದ ಸಿಗುವ ಯೋಜನೆಯ ಪ್ರಕಟಣೆಯ ವಿವರಗಳನ್ನ ಇಲ್ಲಿ ಗಮನಿಸಬಹುದು .

ಜಿಲ್ಲಾಡಳಿತ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಹೈನುಗಾರಿಕೆ ಮತ್ತು ಬೇಕರಿ ಉತ್ಪನ್ನಗಳ ತರಬೇತಿ, ಉದ್ಯೋಗ ಮೇಳ, ವಿದ್ಯಾರ್ಥಿನಿಲಯ ಪ್ರವೇಶ, ಪ್ರತಿಭಾ ಪುರಸ್ಕಾರ ಸೇರಿದಂತೆ ಹಲವು ಮಹತ್ವದ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರ ಜೊತೆಗೆ ಮೆಸ್ಕಾಂ ಜನಸಂಪರ್ಕ ಸಭೆ, ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ, ಬುಡಕಟ್ಟು ಜನಾಂಗದವರ ಅಭಿವೃದ್ಧಿಗಾಗಿ ಜನ ಭಾಗೀದಾರಿ ವಿಶೇಷ ಅಭಿಯಾನ ಹಾಗೂ ಕಾಣೆಯಾದ ವ್ಯಕ್ತಿಯ ಕುರಿತಾದ ಪ್ರಮುಖ ಸರ್ಕಾರಿ ಪ್ರಕಟಣೆಗಳ ಸಮಗ್ರ ಮಾಹಿತಿ ಇಲ್ಲಿದೆ.

Shivamogga Govt Announcements / ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ 19 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.;9448998783 ಸಂಪರ್ಕಿಸಬಹುದಾಗಿದೆ.

Shivamogga Govt Announcements /ಉಚಿತ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿ: ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯು ಗ್ರಾಮೀಣ ಭಾಗದ ಯುವಕ-ಯುವತಿಯರಿಗಾಗಿ 12 ದಿನಗಳ ಉಚಿತ “ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ” ತರಬೇತಿಯನ್ನು ಆಯೋಜಿಸಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಈ ತರಬೇತಿ ಕಾರ್ಯಕ್ರಮವು ಜೂನ್ 12 ರಿಂದ ಪ್ರಾರಂಭವಾಗಲಿದ್ದು 18 ರಿಂದ 45 ವರ್ಷದೊಳಗಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರು ಅರ್ಜಿ ಸಲ್ಲಿಸಬಹುದು.

ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಸಂಸ್ಥೆಯ ವತಿಯಿಂದಲೇ ಒದಗಿಸಲಾಗುತ್ತದೆ.

ತರಬೇತಿ ಪೂರ್ಣಗೊಂಡ ನಂತರ ಅಭ್ಯರ್ಥಿಗಳು ಸ್ವಂತ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯ ಮತ್ತು ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ.

ತರಬೇತಿ ಅವಧಿಯಲ್ಲಿ ಹೈನುಗಾರಿಕೆಯ ಮೂಲಭೂತ ಜ್ಞಾನ, ಹಸುಗಳ ಆರೈಕೆ, ಆಹಾರ ನಿರ್ವಹಣೆ, ಹಾಲು ಉತ್ಪಾದನೆ, ಪಶು ಆರೋಗ್ಯ ಸಂರಕ್ಷಣೆ, ಗೋಶಾಲೆ ನಿರ್ವಹಣೆ, ಎರೆಹುಳ ಗೊಬ್ಬರ ತಯಾರಿಕೆ ವಿಧಾನ, ಸಾವಯವ ಕೃಷಿಯ ಮಹತ್ವ, ಗೊಬ್ಬರ ಘಟಕ ಸ್ಥಾಪನೆ ಹಾಗೂ ಸಣ್ಣ ಉದ್ಯಮ ಆರಂಭಿಸುವ ಕುರಿತು ಪ್ರಾಯೋಗಿಕ ತರಬೇತಿಯನ್ನು ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಬಿಳಿ ಹಾಳೆಯ ಮೇಲೆ ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು, ಅದರ ಫೋಟೋ ತೆಗೆದು ಈ ಕೆಳಗಿನ

ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಮಾಡುವ ಮೂಲಕ ಅಥವಾ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಮೊದಲು ಅರ್ಜಿ ಸಲ್ಲಿಸುವವರಿಗೆ ಆದ್ಯತೆ ನೀಡಲಾಗುವುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು ಗೂಗಲ್ ಫಾರ್ಮ್ ಲಿಂಕ್ (https://forms.gle/5qMgpA1XhR4RaBbk8) ಅಥವಾ CBD RSETI Haliyal ವಾಟ್ಸಾಪ್ ಚಾನೆಲ್‌ನಲ್ಲಿರುವ ಲಿಂಕ್ ಬಳಸಬಹುದು.

ಹೆಚ್ಚಿನ ವಿವರಗಳಿಗಾಗಿ ಮತ್ತು ಹೆಸರು ನೋಂದಾಯಿಸಲು ಮೊಬೈಲ್ ಸಂಖ್ಯೆ: 8970145354 / 9483485489 ವೆಬ್‌ಸೈಟ್: www.rsetihaliyal.org

ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆ, ಉದ್ಯೋಗ ವಿದ್ಯಾನಗರ, ಹಳಿಯಾಳ – 581329, ಉತ್ತರ ಕನ್ನಡ ಜಿಲ್ಲೆ ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ

ಶಿವಮೊಗ್ಗ; ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗದ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಮೇ 25 ರಿಂದ ಜೂನ್ 23 ರ ವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ದಿ ತರಬೇತಿಯನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ

ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್‌ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಪ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.

ಆಸಕ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಮೇ.23 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವುದು. ತರಬೇತಿ ಸಮಯದಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ ಎಂದು ಕಾಲೇಜಿನ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. ಮೊ.ಸಂ. 9449187763 ಮತ್ತು ಜಯಶಂಕರ 9686555897 ಇವರುಗಳನ್ನು ಸಂಪರ್ಕಿಸುವುದು.

Shivamogga Govt Announcements / ಮೇ 18 ರಿಂದ 25 ರವರೆಗೆ “ಜನ ಭಾಗೀದಾರಿ” ವಿಶೇಷ ಅಭಿಯಾನ

ಶಿವಮೊಗ್ಗ : ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ವತಿಯಿಂದ ಜಿಲ್ಲೆಯಲ್ಲಿ ಮೇ 18 ರಿಂದ ಮೇ 25 ರವರೆಗೆ “ಜನ ಭಾಗೀದಾರಿ – ಸಬ್‌ಸೇ ದೂರ್, ಸಬ್‌ಸೇ ಪೆಹ್ಲೆ” ಎಂಬ ವಿಶೇಷ ಮಾಹಿತಿ ಶಿಕ್ಷ ಸಂವಹನ(ಐಇಸಿ) ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವುದು ಮತ್ತು ಅದಕ್ಕೆ ಬೇಕಾಗುವ ಅಗತ್ಯ ದಾಖಲಾತಿಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ 17 ಇಲಾಖೆಗಳ ಸಮನ್ವಯದೊಂದಿಗೆ ಈ ಅಭಿಯಾನವನ್ನು ಆಯೋಜಿಸಲಾಗಿದೆ.

ಗ್ರಾಮಗಳಲ್ಲಿ ಜಾಗೃತಿ ಮತ್ತು ಆರೋಗ್ಯ ಶಿಬಿರ

‘ಧರ್ತಿ ಆಬಾ ಜನಜಾತೀಯ ಗ್ರಾಮ್ ಉತ್ಕರ್ಷ್ ಅಭಿಯಾನ್’ (ಡಿಎ-ಜೆಜಿಯುಎ)ಯೋಜನೆಯಡಿ ಆಯ್ಕೆಯಾಗಿರುವ ಶಿವಮೊಗ್ಗ ತಾಲೂಕಿನ ಎರಡು ಪ್ರಮುಖ ಗ್ರಾಮಗಳಲ್ಲಿ ಈ ಕಾರ್ಯಕ್ರಮಗಳು ನಡೆಯಲಿವೆ.ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿರೂಪಿನಕೊಪ್ಪ , ಬಿ.ಬೀರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸದಾಶಿವಪುರ ಈ ಗ್ರಾಮಗಳಲ್ಲಿ ಅಭಿಯಾನದ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರಗಳು ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಮುಖವಾಗಿ ಪಿಎಂ -ಜನ್‌ಮನ್ ಹಾಗೂ ಡಿಎ-ಜೆಜಿಯುಎ ಯೋಜನೆಗಳ ಬಗ್ಗೆ ಸಮುದಾಯದ ಜನರಲ್ಲಿ ವ್ಯಾಪಕ ಅರಿವು ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಶಿವಮೊಗ್ಗ ತಾಲೂಕಿನ ವಿರೂಪಿನಕೊಪ್ಪ ಮತ್ತು ಸದಾಶಿವಪುರ ಗ್ರಾಮಗಳ ಪರಿಶಿಷ್ಟ ಪಂಗಡ ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರಗಳಲ್ಲಿ ಪಾಲ್ಗೊಂಡು ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬೇಕಾಗಿ ಅವರು ಪ್ರಕಟಣೆಯಲ್ಲಿ‌ ವಿನಂತಿಸಿದ್ದಾರೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Shivamogga Govt Announcements ಡಿಸಿ ಕಚೇರಿಯಲ್ಲಿ ಪರಿಚಯಸ್ಥರಿದ್ದಾರೆ ಎಂದು ಹೇಳುತ್ತಾ 80 ಸಾವಿರ ವಂಚನೆ! ಸರ್ಕಾರಿ ಮನೆ ಮಂಜೂರಿನ ಕಥೆ
ಡಿಸಿ ಕಚೇರಿಯಲ್ಲಿ ಪರಿಚಯಸ್ಥರಿದ್ದಾರೆ ಎಂದು ಹೇಳುತ್ತಾ 80 ಸಾವಿರ ವಂಚನೆ! ಸರ್ಕಾರಿ ಮನೆ ಮಂಜೂರಿನ ಕಥೆ