5 SP RANKING & 2500 ಪೊಲೀಸರು ! 500 ಸಿಸಿ ಕ್ಯಾಮರಾ! ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ಬಂದೋಬಸ್ತ್​! ಎಸ್​​ಪಿ ಮಿಥುನ್ ಕುಮಾರ್ ಹೇಳಿದ್ದೇನು?

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’ 

ನಿನ್ನೆಯಷ್ಟೆ ಭದ್ರಾವತಿ ವಿಶ್ವ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಯಶಸ್ವಿಯಾಗಿ ನಡೆದಿದೆ. ಇದರ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ಇಲಾಖೆ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯ ಬಂದೋಬಸ್ತ್​ಗೆ ಸನ್ನದ್ಧವಾಗಿದೆ. 

ಈ ನಿಟ್ಟಿನಲ್ಲಿ ಶಿವಮೊಗ್ಗ ನಗರದಲ್ಲಿ ವಿವಿದೆಡೆ 500 ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳು ಹಾಗೂ 2500 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಬಂದೋಬಸ್ತ್​ ಸಂಬಂಧ ಮಾತನಾಡಿರುವ ಎಸ್​ಪಿ ಮಿಥುನ್ ಕುಮಾರ್​, ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಸಿದ್ದತೆಗಳ ಬಗ್ಗೆ ಮಾತನಾಡಿದ್ದಾರೆ. 

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಬಂದೋಬಸ್ತ್ ಕರ್ತವ್ಯಕ್ಕೆ 05 ಹೆಚ್ಚುವರಿ ಪೊಲೀಸ್  ಅಧೀಕ್ಷಕರು 14 ಪೊಲೀಸ್  ಉಪಾಧೀಕ್ಷಕರು, 40 ಪೋಲಿಸ್ ನಿರೀಕ್ಷಕರು, 75 ಪೊಲೀಸ್ ಉಪನಿರೀಕ್ಷಕರು, 2,500 ಎಎಸ್ಐ, ಹೆಚ್.ಸಿ, ಪಿಸಿ ಮತ್ತು ಹೋಂ ಗಾರ್ಡ್ ಸಿಬ್ಬಂದಿಗಳು, 10 ಡಿಎಆರ್ ತುಕಡಿ, 15 ಕೆಎಸ್ಆರ್.ಪಿ ತುಕಡಿ, 02 ಆರ್.ಎ.ಎಫ್ ಕಂಪನಿಗಳು 100 ವಿಡಿಯೋ ಕ್ಯಾಮರಾಗಳು ಮತ್ತು 08 ಡ್ರೋಣ್ ಕ್ಯಾಮರಾಗಳನ್ನು  ನಿಯೋಜಿಸಲಾಗಿರುತ್ತದೆ ಹಾಗೂ ಮೆರವಣಿಗೆ ಮಾರ್ಗ ಮತ್ತು ಪ್ರಮುಖ ಸ್ಥಳಗಳಲ್ಲಿ 500 ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಎಸ್​ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. 


ಇನ್ನಷ್ಟು ಸುದ್ದಿಗಳು 

  1. BREAKING NEWS / ಜೋಗದ ಸಮೀಪ ನೀರಿಗಿಳಿದಿದ್ದ ಓರ್ವ ಅಧಿಕಾರಿ ಮತ್ತು ಬ್ಯಾಂಕ್ ಉದ್ಯೋಗಿ ಸಾವು! ಕಾರ್ಗಲ್​ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದ್ದೇನು?

  2. ಲೋಡ್ ಗಾಡಿಯಿಂದ ಬಿದ್ದ ಮರದ ತುಂಡು ಬಡಿದು ಬೈಕ್​ ಸವಾರನ ಸ್ಥಿತಿ ಗಂಭೀರ! ಹೀಗೂ ಆಗುತ್ತೆ ಹುಷಾರು ತಪ್ಪದಿರಿ ವಾಹನ ಸವಾರರೇ?

  3. ದೌರ್ಜನ್ಯ ಪ್ರಕರಣ ! ಶಿವಮೊಗ್ಗ ಡಿಸಿಯಿಂದ 15 ಸೂಚನೆ! ಯುವಕನ ಸಾವು, ಮರಳು, ಅಧಿಕಾರಿಗಳಿಂದ ಕಿರುಕುಳ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor