ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಗನ್ ಮತ್ತು ಡ್ರ್ಯಾಗರ್ ಹಿಡಿದುಕೊಂಡು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿದವನ ವಿರುದ್ಧ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ ಆರೋಪದ ಅಡಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ನಗರದ ರಾಗಿಗುಡ್ಡ ಸರ್ಕಲ್‌ನಲ್ಲಿ ಸೆ.23ರಂದು ಕರ್ತವ್ಯದಲ್ಲಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿರುವ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ……………. ಹೆಸರಿನ ಖಾತೆಯಲ್ಲಿ ವಿಡಿಯೋ ಪೋಸ್ಟ್ ಆಗಿರುವುದು ಕಂಡುಬಂದಿದೆ.
ಈ ವಿಡಿಯೋದಲ್ಲಿ ಯುವಕನೊಬ್ಬ ಒಂದು ಕೈಯಲ್ಲಿ ಗನ್ ಹಾಗೂ ಮತ್ತೊಂದು ಕೈಯಲ್ಲಿ ಡ್ರ್ಯಾಗರ್ ಹಿಡಿದುಕೊಂಡು 11 ಸೆಕೆಂಡ್‌ಗಳ ಕಾಲ ಭಯ ಹುಟ್ಟಿಸುವ ರೀತಿಯಲ್ಲಿ ನಡೆದುಕೊಂಡಿದ್ದಾನೆ. ಈ ಕಾರಣಕ್ಕಾಗಿ ಇನ್‌ಸ್ಟಾಗ್ರಾಂ ಖಾತೆಯ ಮಾಹಿತಿ ಹಾಗೂ ವಿಡಿಯೋ ಪರಿಶೀಲಿಸಿದ ಪೊಲೀಸರು ಸುಹೇಲ್ ಮಾಮ ಎಂಬಾತನ ವಿರುದ್ಧ ಸುಮುಟೋ ಕೇಸ್ ಮಾಡಿದ್ದಾರೆ. ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ, 1959ರ ಕಲಂ 25(1)(a) ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

