ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ತಾಲೂಕಿನ ಜಾವಳ್ಳಿ ಸಮೀಪ ಟಿಟಿ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಮೂಲದ 31 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ಯುವಕನನ್ನು ಹೊಳಲ್ಕೆರೆ ಮೂಲದ ದರ್ಶನ್ (31) ಎಂದು ಗುರುತಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಶರತ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಡಿಕ್ಕಿಯ ರಭಸಕ್ಕೆ ಕಾರು ಚಾಲಕ ಶರತ್ ಅವರ ಕಾಲು ವಾಹನದೊಳಗೆ ಸಿಲುಕಿಕೊಂಡಿತ್ತು. ಇನ್ನೂ ಕಾರಿನ ಮುಂಭಾಗ ಪೂರ್ತಿ ಜಖಂಗೊಂಡಿತ್ತು. ಸ್ಥಳದಲ್ಲಿದ್ದವರು ಹರಸಾಹಸ ಪಟ್ಟು ಶರತ್ರನ್ನ ಕಾರಿನಿಂದ ಹೊರಗೆಳೆದು ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
