ಶಿವಮೊಗ್ಗ ಮಾರಿಕಾಂಬಾ ಜಾತ್ರೆ ಆರಂಭ: ಭಕ್ತಸಮೂಹಕ್ಕೆ ಮಾರವ್ವನ ಮೊದಲ ದರ್ಶನ

Shivamogga Kote Marikamba Jatre 2026 ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಮಲೆನಾಡಿನ ಇತಿಹಾಸ ಪ್ರಸಿದ್ಧ ಶಿವಮೊಗ್ಗದ ಕೋಟೆ ಮಾರಿಕಾಂಬೆ ದೇವಿಯ ಜಾತ್ರಾ ಮಹೋತ್ಸವಕ್ಕೆ ಇಂದು ಬೆಳಿಗ್ಗೆ ಅತ್ಯಂತ ಸಡಗರದಿಂದ ಚಾಲನೆ ದೊರೆತಿದೆ. ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ತವರುಮನೆಯಿಂದ ಬಂದ ಮಾರಿಕಾಂಬೆಯನ್ನ ನೋಡಲು ಬೆಳಗಿನ ಜಾವದಿಂದಲೇ ಸಾವಿರಾರು ಮಂದಿ ನೆರೆದಿದ್ದರು. ಸಂಪ್ರದಾಯದಂತೆ ಇವತ್ತು ಬೆಳಗಿನ ಜಾವ ಗಾಂಧಿಬಜಾರಿನ ನಾಡಿಗರ ಮನೆಯ ಮುಂದೆ ದೇವಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ, ದರ್ಶನಕ್ಕೆ ಅಧಿಕೃತವಾಗಿ ಅವಕಾಶ ಮಾಡಿಕೊಡಲಾಗಿದೆ. 

Colorful festival celebration with idol.

ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶ ಮಂಜುನಾಥ ನಾಯಕ್ ಬೆಳಗಾವಿಗೆ ವರ್ಗಾವಣೆ

Shivamogga Kote Marikamba Jatre 2026

ಗಾಂಧಿಬಜಾರ್​ನ ಎರಡು ಕಡೆಗಳಲ್ಲಿಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನೂ ನಾಳೆಯಿಂದ ಮಾರಿಕಾಂಬೆ ಗದ್ದುಗೆ ಏರಲಿದ್ದು ಗದ್ದುಗೆಗೆ ಬೆಂಗಳೂರಿನ ಕುಶಲಕರ್ಮಿಗಳಿಂದ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಹಣ್ಣು ಮತ್ತು ಹೂವುಗಳ ವಿಶೇಷ ಅಲಂಕಾರ ಮಾಡಲಾಗಿದೆ. ಇದಕ್ಕಾಗಿ ಟನ್‌ಗಟ್ಟಲೆ ಕಲ್ಲಂಗಡಿ, ಕಬ್ಬು, ಕಿತ್ತಳೆ ಹಾಗೂ ಸಾವಿರಾರು ಗುಲಾಬಿ ಹೂವುಗಳನ್ನು ಬಳಸಲಾಗಿದೆ. ಇನ್ನೂ ವಿಶೇಷ ದರ್ಶನ ಬಯಸುವ ಭಕ್ತರಿಗಾಗಿ 200 ರೂ. ಮತ್ತು 500 ರೂ.ಗಳ ಟಿಕೆಟ್ ದರ ನಿಗದಿಪಡಿಸಲಾಗಿದ್ದು, ಪ್ಲಾಸ್ಟಿಕ್ ಮುಕ್ತ ಜಾತ್ರೆಗಾಗಿ ಈ ಬಾರಿ 20 ಸಾವಿರ ಗೋಧಿಹಿಟ್ಟಿನ ಚೀಲಗಳಲ್ಲಿ ಪ್ರಸಾದ ವಿತರಿಸಲಾಗುತ್ತಿದೆ.

ಲಕ್ಷಾಂತರ ಜನ ಸೇರುತ್ತಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. 500 ಹೋಮ್‌ಗಾರ್ಡ್ಸ್, 250 ಸಿವಿಲ್ ಪೊಲೀಸರು, ಕೆಎಸ್ಆರ್‌ಪಿ ಹಾಗೂ ಡಿಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಅಲ್ಲದೆ 50ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳು ಹಾಗೂ 8 ವಾಚ್ ಟವರ್‌ಗಳ ಮೂಲಕ ನಿಗಾ ಇಡಲಾಗುತ್ತಿದೆ.

ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದ್ದು, ಸೈನ್ಸ್ ಮೈದಾನ ಹಾಗೂ ಸೇಕ್ರೆಡ್ ಹಾರ್ಟ್ ಚರ್ಚ್ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.  

ಹೆಂಡತಿಯನ್ನೆ ಕೊಂದ ಗಂಡನಿಗೆ ಶಿವಮೊಗ್ಗ ಕೋರ್ಟ್​ ನೀಡಿತು ಕಠಿಣ ಶಿಕ್ಷೆ! ಡಿಶ್​ ಕೇಬಲ್​ ವಯರ್​ ಮರ್ಡರ್​ ಕಥೆಗೆ ತಾರ್ಕಿಕ ಅಂತ್ಯ!

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

Shivamogga Kote Marikamba Jatre 2026: Thousands Queue for Devi Darshan on Day ಶಿವಮೊಗ್ಗದ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬೆ ಜಾತ್ರೆಗೆ ಅದ್ಧೂರಿ ಚಾಲನೆ ದೊರೆತಿದೆ. ಮೊದಲ ದಿನವೇ ದೇವಿಯ ದರ್ಶನಕ್ಕಾಗಿ ಕಿಲೋಮೀಟರ್‌ಗಟ್ಟಲೆ ಸರದಿ ಸಾಲು ನಿರ್ಮಾಣವಾಗಿದ್ದು, ಭದ್ರತೆ ಹಾಗೂ ದರ್ಶನ ವ್ಯವಸ್ಥೆಯ ಸಂಪೂರ್ಣ ಮಾಹಿತಿ ಇಲ್ಲಿದೆ.