CRIME INVESTIGATION

ಶಿವಮೊಗ್ಗ ಕೋಟೆ ಪೊಲೀಸ್​​ ಆಪರೇಷನ್​ ! ಇಬ್ಬರು ಅರೆಸ್ಟ್​!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ದಂಧೆಯನ್ನು ಪೊಲೀಸರು ಬ್ರೇಕ್ ಮಾಡಿದ್ದಾರೆ.

ರಾಜೀವ್ ಗಾಂಧಿ ಬಡಾವಣೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಶಿವಮೊಗ್ಗ-ಎ ಉಪವಿಭಾಗದ ಡಿವೈಎಸ್ಪಿ ನೇತೃತ್ವದದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಅಂದಾಜು 1,00,000 ರೂಪಾಯಿ ಮೌಲ್ಯದ 1 ಕೆಜಿ 67 ಗ್ರಾಂ ತೂಕದ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ಇದರ ಜೊತೆಗೆ, ಕೃತ್ಯಕ್ಕೆ ಬಳಸಲಾಗಿದ್ದ ಒಂದು ಕಾರು ಹಾಗೂ 3290 ರೂಪಾಯಿ ನಗದು ಸ್ವಾಧೀನಪಡಿಸಿಕೊಂಡಿದ್ದಾರೆ.

ಶಿವಮೊಗ್ಗ ಕೋಟೆ ಪೊಲೀಸ್​​ ಆಪರೇಷನ್​ ! ಇಬ್ಬರು ಅರೆಸ್ಟ್​!​ Shivamogga Kote Police Raid: Two Arrested with 1.067 kg Ganja in Rajiv Gandhi Layout
ಶಿವಮೊಗ್ಗ ಕೋಟೆ ಪೊಲೀಸ್​​ ಆಪರೇಷನ್​ ! ಇಬ್ಬರು ಅರೆಸ್ಟ್​!​ Shivamogga Kote Police Raid: Two Arrested with 1.067 kg Ganja in Rajiv Gandhi Layout

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ