SHIVAMOGGA NEWS TODAY

ಶಿವಮೊಗ್ಗ: ಮದುವೆಯಾದ 18 ದಿನಗಳಲ್ಲೇ ಕರ್ತವ್ಯ ನಿರತ ಯುವ ಕೆಎಸ್ಆರ್‌ಪಿ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) 8ನೇ ಪಡೆಯ ಕಾನ್ಸ್‌ಟೇಬಲ್ ಈರಣ್ಣ ಗುಡಾದಾರ್ (26) ಅವರು ಮಂಗಳವಾರ ಹೃದಯಾಘಾತದಿಂದ  ಸಾವನ್ನಪ್ಪಿದ್ದಾರೆ. 

ಶಿವಮೊಗ್ಗ: ಲೋ ನವೀನ ಚಿತ್ರಕ್ಕೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ, ಶಿವಮೊಗ್ಗದಲ್ಲಿ ನಟ ನವೀನ್​ ಸಜ್ಜು ಹೇಳಿದ್ದೇನು  

ಮೃತ ಈರಣ್ಣ ಗುಡಾದಾರ್ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾಗಿದ್ದು, ಕಳೆದ 7 ವರ್ಷಗಳಿಂದ ಶಿವಮೊಗ್ಗದ ಕೆಎಸ್ಆರ್‌ಪಿ 8ನೇ ಪಡೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ (ಮೇ 26) ಕರ್ತವ್ಯದ ಅವಧಿಯಲ್ಲೇ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತ ಸಂಭವಿಸಿದೆ. ಇದನ್ನು ಗಮನಿಸಿದ ಸಹೋದ್ಯೋಗಿಗಳು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರಾದರೂ, ದುರದೃಷ್ಟವಶಾತ್ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಅತ್ಯಂತ ದುಃಖದ ಸಂಗತಿಯೆಂದರೆ, ಮೃತ ಈರಣ್ಣ ಅವರಿಗೆ ಕೇವಲ 18 ದಿನಗಳ ಹಿಂದೆಯಷ್ಟೇ ಅದ್ಧೂರಿಯಾಗಿ ವಿವಾಹವಾಗಿತ್ತು.

shivamogga KSRP Constable Dies 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.