ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ನಿನ್ನೆ ಸಂಭವಿಸಿದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ಧಾರೆ. ಜಿಲ್ಲೆಯ ಶಿವಮೊಗ್ಗ ಹಾಗೂ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆದಿನ ಶುಕ್ರವಾರ ಎರಡು ಕಡೆಗಳಲ್ಲಿ ಅಪಘಾತವಾಗಿದೆ.
ಮುಂಬೈ ಕ್ರೈಂ ಪೊಲೀಸ್ ಹೆಸರಲ್ಲಿ ಶಿವಮೊಗ್ಗದ ವ್ಯಕ್ತಿಗೆ 51 ಲಕ್ಷ ರೂಪಾಯಿ ವಂಚನೆ : ಏನಿದು ಪ್ರಕರಣ
ಕುಂಸಿ ಸಮೀಪ ಟ್ರ್ಯಾಕ್ಟರ್ ಹರಿದು ಇಬ್ಬರು ಸಾವು/, Shivamogga local News Paper report
ಕುಂಸಿ ಸಮೀಪದ ಆಯನೂರು ಮತ್ತು ಹಾರನಹಳ್ಳಿ ಮಾರ್ಗ ಮಧ್ಯೆ ಶುಕ್ರವಾರ ಸಂಜೆ ಟ್ರ್ಯಾಕ್ಟರ್ ಹರಿದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಲ್ಲಾಪುರ ಗ್ರಾಮದ ಆಕೀಫ್ (25) ಮತ್ತು ಚಾಂದ್ ಪೀರ್ (18) ಮೃತಪಟ್ಟ ದುರ್ದೈವಿಗಳು.
ಘಟನೆಯಲ್ಲಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ, ಬೈಕ್ ಚಾಲಕ ಮತ್ತು ಹಿಂಬದಿ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ ಹಿಂದೆ ಬರುತ್ತಿದ್ದ ಟ್ರ್ಯಾಕ್ಟರ್ ಕೆಳಕ್ಕೆ ಬಿದ್ದವರ ಮೇಲೆ ಹರಿದಿದೆ. ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕುಂಸಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿರುವ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಕ್ರಿಕೆಟ್: ಸಾಗರದ ವಿರಾಟ್ ಆರ್. ಗಣ್ಯಗೆ ಕರ್ನಾಟಕ ತಂಡದಲ್ಲಿ ಸ್ಥಾನ
Shivamogga local News Paper report / ಪೆಟ್ರೋಲ್ ಬಂಕ್ ಸಮೀಪ ಬೈಕ್ ಡಿಕ್ಕಿ
ಇನ್ನೊಂದು ಘಟನೆಯಲ್ಲಿ ನಗರದ ಗಂಧರ್ವ ನಗರದ ಕ್ರಾಸ್ ಪಕ್ಕದಲ್ಲಿರುವ ಪೆಟ್ರೋಲ್ ಬಂಕ್ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ತೀವ್ರ ಗಾಯಗೊಂಡವರನ್ನು ಮಲ್ಲಿಕಾರ್ಜುನ ನಗರದ ನಿವಾಸಿ ಡಿ.ಎಲ್. ಈಶ್ವರೇಗೌಡ (55) ಎಂದು ಗುರುತಿಸಲಾಗಿದೆ. ಬೆಳಗ್ಗೆ ಅವರು ಎನ್.ಎಚ್. ಆಸ್ಪತ್ರೆಗೆ ತೆರಳಿ ಪತ್ನಿಯೊಂದಿಗೆ ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಪೆಟ್ರೋಲ್ ಹಾಕಿಸಿಕೊಳ್ಳುವ ಸಲುವಾಗಿ ಹೋಗುತ್ತಿದ್ದಾಗ, ಬೈಕ್ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಈಶ್ವರೇಗೌಡ ಅವರು ರಸ್ತೆ ಪಕ್ಕದಲ್ಲಿ ಬಿದ್ದು ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣ ಆಟೋದ ಮೂಲಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಡಿಕ್ಕಿ ಹೊಡೆದ ಬೈಕ್ ಹಾಗೂ ಅದರ ಚಾಲಕನನ್ನು ಪತ್ತೆ ಹಚ್ಚಿದ್ದಾರೆ. ಈ ಘಟನೆ ಸಂಬಂಧ ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇಳಿಕೆ ಇಲ್ಲ, ಏರಿಕೆಯಿಲ್ಲ! ಅಡಿಕೆ ರೇಟು ಎಷ್ಟಿದೆ? ರೈತರಿಗೆ ಸಿಕ್ಕ ದರ ಎಷ್ಟು?
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!






