Shimoga Lokayukta / ಜಿಲ್ಲಾ ಪಂಚಾಯತ್ ಕಚೇರಿಗೆ, ಶಿವಮೊಗ್ಗ ಲೋಕಾಯುಕ್ತರ ದಿಢೀರ್​ ಭೇಟಿ! ಕಡತ ಪರಿಶೀಲನೆ

SHIVAMOGGA  |  Jan 19, 2024  | shimoga lokayukta ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿಯ ಸಿಬ್ಬಂದಿಗಳಿಗೆ ಇವತ್ತು ಶಿವಮೊಗ್ಗ ಲೋಕಾಯುಕ್ತ (shimoga lokayukta) ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಇವತ್ತು ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿಗೆ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಕಡತ ಪರಿಶೀಲನೆ ನಡೆಸ್ತಿದ್ದಾರೆ. 

ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ  ಸೇರಿದಂತೆ ವಿವಿಧ ಯೋಜನೆಗಳಲ್ಲಿ ಸಮರ್ಪಕವಾಗಿ ಬಿಲ್ ಆಗುತ್ತಿಲ್ಲ, ಕಡತ ವಿಲೇವಾರಿ ಆಗುತ್ತಿಲ್ಲ ಎಂಬ ದೂರುಗಳು ಶಿವಮೊಗ್ಗ ಲೋಕಾಯುಕ್ತ ಕಚೇರಿಗೆ ಬಂದಿದೆ ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಖಲಾತಿ ಪರಿಶೀಲನೆಗಾಗಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿಗೆ (Zilla Panchayat office shimoga )ಸಿಬ್ಬಂದಿ ಸಮೇತ ಆಗಮಿಸಿದ್ದಾರೆ. 

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಶಿವಮೊಗ್ಗ ಲೋಕಾಯುಕ್ತ ಡಿವೈಎಸ್​ಪಿ ಉಮೇಶ್ ಈಶ್ವರ್ ನಾಯ್ಕ್ (Umesh Ishwara Naik Dy,Sp) ರ ನೇತೃತ್ವದಲ್ಲಿ ಪರಿಶೀಲನೆ ನಡೆಸ್ತಿದ್ದಾರೆ. ಸಿಬ್ಬಂದಿಗಳು ಕಚೇರಿಯ ಕಡತಗಳನ್ನ ಪರಿಶೀಲನೆ ನಡೆಸ್ತಿದ್ದು ಆಧಿಕಾರಿಗಳನ್ನು ಈ ಸಂಬಂಧ ವಿಚಾಣೆ ನಡೆಸ್ತಿದ್ದಾರೆ. 


Leave a Comment