ಶಿವಮೊಗ್ಗಕ್ಕೆ ಬಂದ ಸಚಿವ ಮಧು ಬಂಗಾರಪ್ಪ | ಇವತ್ತು ನಾಳೆ ಎಲ್ಲೆಲ್ಲಿ ಓಡಾಟ? | ವಿವರ ಇಲ್ಲಿದೆ
shivamogga madhu bangarappa , ಮಧು ಬಂಗಾರಪ್ಪ,

SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 1, 2024 | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಮತ್ತು ನಾಳೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಅ.01 ರಂದು ಅಂದರೆ ಇವತ್ತು ಬೆ.9.00ಕ್ಕೆ ಸೊರಬಕ್ಕೆ ಆಗಮಿಸಿರುವ ಅವರು ಆನವಟ್ಟಿ ಯಲ್ಲಿ 17 ವರ್ಷದ ಒಳಗಿನ ಪ್ರೌಢಶಾಲಾ ಬಾಲಕ/ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಹಗೂ ಬಾಲ್‌ಬ್ಯಾಡ್ಮಿಂಟನ್ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಸೊರಬದ ಡಾ|| ರಾಜ್ ಕಲಾಕ್ಷೇತ್ರದಲ್ಲಿ ನಿವೃತ್ತ ನೌಕರರ ಪ್ರಪ್ರಥಮ ಸಮ್ಮೇಳನ-2024-25 ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ 75 ವರ್ಷ ಮೇಲ್ಪಟ್ಟ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ನಂತರ ಸಾಗರದ ಗಾಂಧಿ ಮೈದಾನ, ನಗರಸಭೆ ಆವರಣದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 06 ದಿನಗಳ ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಜಿಲ್ಲಾಮಟ್ಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂ. 4.00ಕ್ಕೆ ಶಿವಮೊಗ್ಗದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರೊಂದಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಇನ್ನೂ ನಾಳೆ ಅಂದರೆ ಅಕ್ಟೋಬರ್ 02 ರಂದು ಶಿವಮೊಗ್ಗ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------------------------