ಶಿವಮೊಗ್ಗ: 105 ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಹಾಗೂ ಉದ್ಯೋಗ ಸಾಲ ವಿತರಿಸಿದ ಶಾಸಕ ಚನ್ನಬಸಪ್ಪ!

ಹಂಚಿಕೊಳ್ಳಿ
WhatsApp Facebook X Telegram
Shivamogga MLA
Shivamogga MLA

Shivamogga MLA ಶಿವಮೊಗ್ಗ | ಸಮಾಜದಲ್ಲಿ ಹಿಂದುಳಿದ ಹಾಗೂ ಆರ್ಥಿಕವಾಗಿ ನೊಂದ ವರ್ಗಗಳ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಉದ್ಯೋಗ ಆಧಾರಿತ ಆರ್ಥಿಕ ನೆರವು ಅತ್ಯಂತ ಅನಿವಾರ್ಯವಾಗಿದೆ. ಫಲಾನುಭವಿಗಳು ಸರ್ಕಾರದ ವಿವಿಧ ನಿಗಮಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಕರೆ ನೀಡಿದ್ದಾರೆ.

ಶಿವಮೊಗ್ಗ: ಮನೆಯ ಪ್ಯಾಸೇಜ್‌ನಲ್ಲಿ ಕಾಣಿಸಿಕೊಂಡ ಅಪರೂಪದ ಮರದ ಹಾವು ರಕ್ಷಣೆ

ಶಾಸಕರ ಅಧಿಕೃತ ಕಾರ್ಯಾಲಯವಾದ ಶಿವಮೊಗ್ಗದ ಕರ್ತವ್ಯ ಭವನ’ದಲ್ಲಿ ಇಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಹಾಗೂ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭದ ಅಧ್ಯಕ್ಷತೆ ವಹಿಸಿ ಶಾಸಕರು ಸೌಲಭ್ಯಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಶಾಸಕರ ಹಸ್ತದಿಂದ ಕ್ಷೇತ್ರದ ಒಟ್ಟು 50 ಅರ್ಹ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಇದರೊಂದಿಗೆ ಸ್ವಯಂ ಉದ್ಯೋಗದ ಮೂಲಕ ಹೊಸ ಬದುಕು ಕಟ್ಟಿಕೊಳ್ಳಲು ಮುಂದಾದ 55 ಅರ್ಹ ಅಭ್ಯರ್ಥಿಗಳಿಗೆ ನಿಗಮದ ನೇರ ಸಾಲ ಯೋಜನೆಯಡಿ ಸಾಲದ ಪತ್ರ ಹಾಗೂ ಸಬ್ಸಿಡಿ ಮಂಜೂರಾತಿ ಆದೇಶ ಪತ್ರಗಳನ್ನು ಹಸ್ತಾಂತರಿಸಲಾಯಿತು.

ಇದೇ ವೇಳೆ ಮಾತನಾಡಿದ ಶಾಸಕ ಎಸ್.ಎನ್. ಚನ್ನಬಸಪ್ಪ, ನಮ್ಮ ಆಡಳಿತಾವಧಿಯಲ್ಲಿ ಮಧ್ಯವರ್ತಿಗಳ ಹಾವಳಿಗೆ ಸಂಪೂರ್ಣ ಬ್ರೇಕ್ ಹಾಕಲಾಗಿದೆ. ಅರ್ಹತೆ ಹೊಂದಿರುವ ನೈಜ ಫಲಾನುಭವಿಗಳ ಕೈಗೆ ನೇರವಾಗಿ ಸರ್ಕಾರದ ಸೌಲಭ್ಯಗಳು ತಲುಪುವಂತೆ ಅತ್ಯಂತ ಪಾರದರ್ಶಕ ವ್ಯವಸ್ಥೆ ಕಲ್ಪಿಸಲಾಗಿದೆ. ನಮ್ಮ ಕರ್ತವ್ಯ ಭವನವು ಸದಾ ಕ್ಷೇತ್ರದ ಜನರ ಸೇವೆಗೆ ಮುಕ್ತವಾಗಿರುತ್ತದೆ” ಎಂದು ಸ್ಪಷ್ಟಪಡಿಸಿದರು . ಅತ್ಯಂತ ಸರಳ ಹಾಗೂ ನೇರವಾಗಿ ಸೌಲಭ್ಯಗಳನ್ನು ಪಡೆದುಕೊಂಡ ನೂರಾರು ಫಲಾನುಭವಿಗಳು ಶಾಸಕರ ತ್ವರಿತ ಕಾರ್ಯವೈಖರಿ ಹಾಗೂ ಜನಪರ ಕಾಳಜಿಗೆ ಮನಸಾರೆ ಕೃತಜ್ಞತೆ ಸಲ್ಲಿಸಿದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor