ಶಿವಮೊಗ್ಗ: ಕೊಲೆ ಪ್ರಕರಣ, ಆರೋಪಿಗೆ 7 ವರ್ಷ ಜೈಲು ಶಿಕ್ಷೆ

prathapa thirthahalli
Prathapa thirthahalli - content producer

Shivamogga Murder Case :ಶಿವಮೊಗ್ಗ: ಹಳೆಯ ದ್ವೇಷದ ಕಾರಣಕ್ಕೆ ಯುವಕನ ಕೊಲೆ ಮಾಡಿದ ಪ್ರಕರಣದಲ್ಲಿ, ಆರೋಪಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ನಗರದ ಬಾಪೂಜಿನಗರ ನಿವಾಸಿಯಾದ 21 ವರ್ಷದ ರಾಹಿಲ್ ಎಂಬಾತನನ್ನು ಅಜ್ಗರ್ ಖಾನ್ ಎಂಬುವನು 2021 ರಲ್ಲಿ ಕೊಲೆ ಮಾಡಿದ್ದ. ಈ ಕೃತ್ಯದ ಕುರಿತು ಅಜ್ಗರ್ ಖಾನ್ ವಿರುದ್ಧದ ಆರೋಪಗಳು ನ್ಯಾಯಾಲಯದಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ಯಶವಂತ್ ರವರು ಈ ಶಿಕ್ಷೆಯನ್ನು ಪ್ರಕಟಿಸಿದ್ದಾರೆ.

- Advertisement -

ಕೊಲೆ ಆರೋಪಿಗೆ 7 ವರ್ಷಗಳ ಜೈಲು ಶಿಕ್ಷೆಯ ಜೊತೆಗೆ, ವಿಧಿಸಿದ ದಂಡದ ಮೊತ್ತವನ್ನು ಕಟ್ಟಲು ವಿಫಲರಾದರೆ, ಹೆಚ್ಚುವರಿ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯದ ಆದೇಶದಲ್ಲಿ ತಿಳಿಸಲಾಗಿದೆ.

 

Share This Article
prathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Leave a Comment

Leave a Reply

Your email address will not be published. Required fields are marked *