ಶಿವಮೊಗ್ಗ : ದೊಡ್ಡಪೇಟೆಯಲ್ಲಿ ಚಾಕುವಿನಿಂದ ಇರಿದು ಕೊಲೆ ; ಫೈರೋಜ್ ಖಾನ್‌ಗೆ 7 ವರ್ಷ ಕಠಿಣ ಜೈಲು ಶಿಕ್ಷೆ, ₹10 ಸಾವಿರ ದಂಡ

ಹಂಚಿಕೊಳ್ಳಿ
WhatsApp Facebook X Telegram
Shivamogga Murder Case Firoz Khan Sentenced to 7 Years in Prison
Shivamogga Murder Case Firoz Khan Sentenced to 7 Years in Prison

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ ಫೈರೋಜ್ ಖಾನ್ (39) ಎಂಬಾತನಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ಯಶವಂತ ಕುಮಾರ್ ಅವರು ನವೆಂಬರ್ 19ರಂದು ಶಿಕ್ಷೆಯ ಆದೇಶ ಪ್ರಕಟಿಸಿದ್ದಾರೆ.

2025ರ ಏ. 27ರಂದು ನಗರದ ಬಿ.ಎಚ್. ರಸ್ತೆಯ ಸಿಎಂ ಬಾರ್‌ ಸಮೀಪ ಶಶಿನಾಯ್ಕ್​ ಮತ್ತು ನಾಗೇಶ್ ನಾಯ್ಕ್​ ತೆರಳುತ್ತಿದ್ದಾಗ, ಫೈರೋಜ್ ಖಾನ್ ಹಣ ಕೇಳಿದ್ದ. ಹಣವಿಲ್ಲವೆಂದು ತಿಳಿಸಿದ ಶಶಿನಾಯ್ಕ್ ಅವರೊಂದಿಗೆ ಜಗಳವಾಡಿ, ಚಾಕುವಿನಿಂದ ಇರಿದು ಕೊಲೆ ಮಾಡಿದ್ದ . ಈ ಹಿನ್ನಲೆ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿ ರವಿ ಪಾಟೀಲ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್. ಸರ್ಕಾರದ ಪರ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಯಶವಂತ ಕುಮಾರ್‌ ಅವರು ನ.19ರಂದು ಶಿಕ್ಷೆ ಪ್ರಕಟಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor