shivamogga news :ರಾಜ್ಯ ಸರ್ಕಾರ ರಾಜ್ಯದಾದ್ಯಂತ ಗುತ್ತಿಗೆದಾರರಿಗೆ 5000 ಸಾವಿರ ಕೋಟಿ ಹಣವನ್ನು ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಡಿದ್ದು ಅದನ್ನು ಕೂಡಲೇ 2 ಹಂತವಾಗಿ ಬಿಡುಗಡೆ ಮಾಡುವಂತೆ ನೀರಾವರಿ ನಿಗಮ ನಿಯಮಿತ, ತುಂಗಾ ಮೇಲ್ದಂಡೆ ಮತ್ತು ಭದ್ರಾ ಗುತ್ತಿಗೆದಾರರ ಹೋರಾಟ ಸಮಿತಿ ಅಧ್ಯಕ್ಷ ಜೆ ಎಂ ಜಗದೀಶ್ ಆಗ್ರಹಿಸಿದ್ದಾರೆ.
ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತಾಣಡಿದ ಅವರು ಸರ್ಕಾರವು ಗುತ್ತಿಗೆದಾರರಿಗೆ ನೀಡಬೇಕಾದ ಸುಮಾರು ₹ 5,000 ಕೋಟಿ ಹಣವನ್ನು ಬಾಕಿ ಉಳಿಸಿಕೊಂಡಿದೆ. ಈ ಹಣವನ್ನು ಹಂತ-ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ಹೇಳುತ್ತಿದ್ದರೂ, ಇದು ಗುತ್ತಿಗೆದಾರರಿಗೆ ಹೆಚ್ಚಿನ ಹೊರೆ ಆಗಲಿದೆ. ಇದರಿಂದಾಗಿ ತೆಗೆದುಕೊಂಡ ಸಾಲಗಳ ಮೇಲೆ ಬಡ್ಡಿ ಹೆಚ್ಚಾಗುತ್ತಿದ್ದು, ಇದು ಗುತ್ತಿಗೆದಾರರ ಮೇಲೆ ಆರ್ಥಿಕ ಒತ್ತಡವನ್ನು ಹೆಚ್ಚಿಸುತ್ತಿದೆ. ಆದ್ದರಿಂದ, ಸರ್ಕಾರ ಕೂಡಲೇ ಎರಡು ಹಂತಗಳಲ್ಲಿ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಜಗದೀಶ್ ಆಗ್ರಹಿಸಿದರು.
ಸಿಮೆಂಟ್ ಮತ್ತು ಕಬ್ಬಿಣದಂತಹ ಕಚ್ಚಾ ವಸ್ತುಗಳ ಬೆಲೆ ನಿರಂತರವಾಗಿ ಏರುತ್ತಿರುವುದು ಮತ್ತೊಂದು ಪ್ರಮುಖ ಸಮಸ್ಯೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಜೊತೆಗೆ, ಮರಳು ಮತ್ತು ಇತರ ಅಗತ್ಯ ವಸ್ತುಗಳ ಲಭ್ಯತೆಯ ಕೊರತೆಯನ್ನೂ ಸರ್ಕಾರ ಪರಿಹರಿಸಬೇಕು ಎಂದು ಅವರು ಒತ್ತಾಯಿಸಿದರು.
ಈ ಎಲ್ಲಾ ಸಮಸ್ಯೆಗಳ ಹಿನ್ನಲೆ ನಗರದ ಗೋಪಾಲಗೌಡ ಬಡಾವಣೆಯಲ್ಲಿರುವ ಆಗಮುಡಿ ಕನ್ವೆನ್ಷನ್ ಹಾಲ್‌ನಲ್ಲಿ ಆಗಸ್ಟ್ 20 ರಂದು ಅಭಿನಂದನಾ ಮತ್ತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಲ್ಲಿ ಸಮಸ್ಯೆಗಳ ಕುರಿತಾಗಿ ಚರ್ಚಿಸಲಾಗುವುದು ಎಂದರು
ರಾಜ್ಯ ಹಿರಿಯ ಗುತ್ತಿಗೆ ದಾರರು ಹಾಗೂ ರಾಜ್ಯ ಸಂಘದ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭವನ್ನು ಸಹ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಅದೇ ದಿನ ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಆರ್. ಮಂಜುನಾಥ್ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಮತ್ತು ಸ್ಥಳೀಯ ಸಂಸ್ಥೆಗಳ ಗುತ್ತಿಗೆದಾರರ ಸಂಘದ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಅವರು ಹೇಳಿದರು.
shivamogga news

