ಶಿವಮೊಗ್ಗದಲ್ಲಿ 2 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆಯ ಎಚ್ಚರಿಕೆ ?

ಹಂಚಿಕೊಳ್ಳಿ
WhatsApp Facebook X Telegram
Shivamogga News Anganwadi Workers Protest
Shivamogga News Anganwadi Workers Protest

Shivamogga News ಶಿವಮೊಗ್ಗ | ಕನಿಷ್ಠ ವೇತನ ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತರು ಇಂದು ಬೃಹತ್ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ : ಮಧು ಬಂಗಾರಪ್ಪರಿಗೆ ಮತ್ತೊಮ್ಮೆ ಸಚಿವ ಸ್ಥಾನ: ನೂತನ ಸಚಿವರ ಪೈನಲ್​​ ಲೀಸ್ಟ್​​​ ಇಲ್ಲಿದೆ ನೋಡಿ

ಮಹಾನಗರ ಪಾಲಿಕೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಸುಮಾರು 2 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿಯನ್ನು ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಹಾಗೆಯೇ ಈ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಇನ್ನೂ ಪ್ರತಿಭಟನಾಕಾರರರ ಪ್ರಮುಖ ಬೇಡಿಕೆಗಳನ್ನು ನೋಡುವುದಾದರೆ ಗೌರವಧನದ ಹಣೆಪಟ್ಟಿ ತೆಗೆದು ಕನಿಷ್ಠ 25 ಸಾವಿರ ರೂಪಾಯಿ ವೇತನ ನೀಡಬೇಕು, ಸೇವಾ ಭದ್ರತೆ ಒದಗಿಸಿ ಉದ್ಯೋಗ ಖಾಯಂಗೊಳಿಸಬೇಕು ಎಂದು ಒತ್ತಾಯಿಸಿದರು .  ಹಾಗೆಯೇ ಇಲಾಖೆಯ ಕೆಲಸ ಹೊರತುಪಡಿಸಿ ಬೇರೆ ಕೆಲಸಗಳಿಗೆ ನಿಯೋಜಿಸಬಾರದು, ಇಲಾಖೆಯ ಎಲ್ಲಾ ಮಾಹಿತಿ ನೀಡಲು 5G ಮೊಬೈಲ್ ನೀಡಬೇಕು, ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಸಂಬಳ ನೀಡಬೇಕು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ESI ಸೌಲಭ್ಯ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor