ಶಿವಮೊಗ್ಗದಲ್ಲಿಯೇ ಕೆಲಸ : 14 ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಿ!

Arivu Kendra Supervisor Posts / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯಾದ್ಯಂತ ಒಟ್ಟು 258 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಇದೀಗ ಇಲ್ಲಿ ಖಾಲಿ ಇರುವ ಕೇಂದ್ರಗಳಿಗೆ ಮೇಲ್ವಿಚಾರಕರನ್ನು ನೇಮಕ ಮಾಡಲು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಒಟ್ಟು 14 ಮೇಲ್ವಿಚಾರಕರ ಹುದ್ದೆಗಳನ್ನು (Arivu Kendra Supervisor Posts) ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ನಿಯಮಾನುಸಾರ ರೋಸ್ಟರ್ ಬಿಂದುಗಳ ಆಧಾರದ ಮೇಲೆ ನಡೆಯಲಿದೆ.

ಜಿಲ್ಲೆಯ ವಿವಿಧ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಈ ಹುದ್ದೆಗಳು ಖಾಲಿಯಿವೆ. ತೀರ್ಥಹಳ್ಳಿ ತಾಲ್ಲೂಕಿನ ಬಾಂಡ್ಯ ಕುಕ್ಕೆ ಹಾಗೂ ಹೊಸಹಳ್ಳಿ, ಸಾಗರ ತಾಲ್ಲೂಕಿನ ಕುದರೂರು, ಕಲ್ಮನೆ ಹಾಗೂ ಹೆಗ್ಗೋಡು ಗ್ರಾಮ ಪಂಚಾಯತಿಗಳಲ್ಲಿ ಮೇಲ್ವಿಚಾರಕರ ಅಗತ್ಯವಿದೆ. ಅದೇ ರೀತಿ ಭದ್ರಾವತಿ ತಾಲ್ಲೂಕಿನ ವೀರಾಪುರ ಮತ್ತು ಕೂಡ್ಲಿಗೆರೆ, ಹೊಸನಗರ ತಾಲ್ಲೂಕಿನ ಸುಳುಗೋಡು ಹಾಗೂ ತ್ರಿಣಿವೆ ಗ್ರಾಮ ಪಂಚಾಯತಿಗಳಲ್ಲಿ ಅವಕಾಶವಿದೆ. ಸೊರಬ ತಾಲ್ಲೂಕಿನ ಭಾರಂಗಿ ಹಾಗೂ ಹರೀಶಿ, ಶಿಕಾರಿಪುರ ತಾಲ್ಲೂಕಿನ ಮುದ್ದನಹಳ್ಳಿ ಹಾಗೂ ಅಂಬಾರಗೊಪ್ಪ ಮತ್ತು ಶಿವಮೊಗ್ಗ ತಾಲ್ಲೂಕಿನ ಚೋರಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಿವು ಕೇಂದ್ರಗಳಲ್ಲಿ ಈ ಹುದ್ದೆಗಳು ಖಾಲಿ ಇವೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ನಿಯಮಗಳು

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ, ದೃಢೀಕರಿಸಿದ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಜುಲೈ 8 ಕಡೆಯ ದಿನಾಂಕವಾಗಿರುತ್ತದೆ. ಅರ್ಜಿ ನಮೂನೆಗಳು ಆಯಾ 14 ಗ್ರಾಮ ಪಂಚಾಯತಿಗಳಲ್ಲಿಯೇ ಲಭ್ಯವಿದ್ದು, ಅಭ್ಯರ್ಥಿಗಳು ಬಯಸಿದಲ್ಲಿ ಅಧಿಕೃತ ವೆಬ್‌ಸೈಟ್ https://shivamogga.nic.in ಮೂಲಕವೂ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಶಿವಮೊಗ್ಗ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಅರ್ಜಿ ಡೌನ್​ಲೋಡ್​ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ಕ್ರಿಶ್ಚಿಯನ್​ ಸಮುದಾಯ ಅಭಿವೃದ್ಧಿ ನಿಗಮದಿಂಧ ಅರ್ಜಿ ಆಹ್ವಾನ

ಮತ್ತೊಂದೆಡೆ, ಜಿಲ್ಲಾ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವು 2026-27ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕ್ರಿಶ್ಚಿಯನ್ ಸಮುದಾಯದವರಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಹೊಸ ಸಿಇಟಿ ಅಥವಾ ಎನ್‌ಇಇಟಿ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಬಯಸಿದ್ದಲ್ಲಿ, ಅಂತಹವರು ಈ ಅರಿವು ಸಾಲ ಸೌಲಭ್ಯವನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ನಿಯಮಗಳು

  • ಆಸಕ್ತ ವಿದ್ಯಾರ್ಥಿಗಳು www.kccdconline.karnataka.gov.in ಜಾಲತಾಣದ ಮೂಲಕ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡಬೇಕು. ತದನಂತರ ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್ ಜೊತೆಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಭಾವಚಿತ್ರ, ಸಿಇಟಿ, ಎನ್‌ಇಇಟಿ ಪ್ರವೇಶ ಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಸಲ್ಲಿಸಬೇಕಾಗಿದೆ.
  • ಈ ದಾಖಲೆಗಳ ಕಡತವನ್ನು ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆ ಮುಂಭಾಗ, ಅಚ್ಯುತ್‌ರಾವ್ ಲೇಔಟ್ ನ 4ನೇ ತಿರುವಿನಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-228262 ಹಾಗೂ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Whatsapp / https://chat.whatsapp.com/JrsZ8He4nN600n0r3tJItz