shivamogga news today : ಶಿವಮೊಗ್ಗ: ಲೈಂಗಿಕ ದೌರ್ಜನ್ಯ ಆರೋಪದಡಿ ಸಹ ಪ್ರಾಧ್ಯಾಪಕ ಅಮಾನತು
ಶಿವಮೊಗ್ಗ: ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಶಿವಮೊಗ್ಗ ವೈದ್ಯಕೀಯ ಕಾಲೇಜಿನ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕರೊಬ್ಬರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಪರಿಷತ್ತಿನ ಉಪಾಧ್ಯಕ್ಷರಾದ ಮೊಹಮ್ಮದ್ ಮೊಹಸಿನ್ ಈ ಕುರಿತು ಆದೇಶ ನೀಡಿದ್ದಾರೆ.
shivamogga news today : ಸಂಸ್ಥೆಯ ಬೈಲಾದ ನಿಯಮ 4ರಲ್ಲಿ ಕಲ್ಪಿಸಿರುವ ಅವಕಾಶವನ್ನು ಉಪಯೋಗಿಸಿಕೊಂಡು, ನಿಯಮ 18ರಂತೆ ಸಕ್ಷಮ ಶಿಸ್ತು ಪ್ರಾಧಿಕಾರವು ಈ ಕ್ರಮ ಕೈಗೊಂಡಿದೆ. ವೈದ್ಯನನ್ನು ಕರ್ನಾಟಕ ಸಿವಿಲ್ ಸೇವಾ ನಿಯಮಗಳು, 1957ರ ನಿಯಮ 10 (2)(ಎ) ರನ್ವಯ ವಶಕ್ಕೆ ಪಡೆದ ದಿನಾಂಕದಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ, ಇವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸರ್ಕಾರಿ ಸೇವೆಯಿಂದ ಅಮಾನತ್ತಿನಲ್ಲಿ ಇರಿಸಲಾಗಿದೆ.
ಅಮಾನತ್ತಿನ ಅವಧಿಯಲ್ಲಿ ವೈದ್ಯನನ್ನು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ 98ರಂತೆ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಅಲ್ಲದೆ, ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ಕೇಂದ್ರ ಸ್ಥಾನವನ್ನು ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

