shivamogga news today ಹಾಸನದಲ್ಲಿ ಹೃದಯಾಘಾತ ಪ್ರಕರಣಗಳ ಹೆಚ್ಚಳದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಶಿವಮೊಗ್ಗದಲ್ಲಿ ಕೇವಲ ಎರಡು ದಿನಗಳ ಅಂತರದಲ್ಲಿ ಯುವಕ, ವೈದ್ಯರು ಮತ್ತು ಬಾಣಂತಿ ಸೇರಿದಂತೆ ಮೂವರು ಹೃದಯಾಘಾತದಿಂದ ಸಾವನ್ನಪ್ಪಿರುವುದು ಆತಂಕ ಮೂಡಿಸಿದೆ.
ಡಿವಿಎಸ್ ಕಾಲೇಜು ವಿದ್ಯಾರ್ಥಿ ಸಾವು
ಜೂನ್ 29ರಂದು ಡಿವಿಎಸ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಶ್ರೀನಿಧಿ (21) ಅವರಿಗೆ ದಿಢೀರನೆ ಎದೆ ನೋವು ಕಾಣಿಸಿಕೊಂಡು ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದೆ.
ಕೆಲವರು ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಿದರೆ ಇನ್ನು ಕೆಲವರು ಹೃದಯಾಘಾತದಿಂದ ಸಾವನ್ನಪ್ಪಿಲ್ಲ ಎಂಬ ಮಾತನ್ನು ಹೇಳುತ್ತಿದ್ದಾರೆ. ಕುರಿತು ಡಿಹೆಚ್ಓ ಮಾಹಿತಿ ನೀಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ ಅದನ್ನು ಮರಣೋತ್ತರ ಪರೀಕ್ಷೆ ಮಾಡಿ ಸಾವು ಹೇಗಾಗಿದೆ ಎಂದು ಹೇಳಬಹುದು. ಆದರೆ ಆ ವಿದ್ಯಾರ್ಥಿ ಮನೆಯಲ್ಲಿ ಮೃತ ಪಟ್ಟಿರುವುದರಿಂದ ಹೇಗೆ ನಿಧನರಾದರು ಎಂದು ಹೇಳಲು ಸಾಧ್ಯವಾಗುವುದಿಲ್ಲ ಎಂದದಿದ್ದಾರೆ
ವೈದ್ಯ ನಿಧನ
ಇನ್ನೂ ಜೂನ್ 30 ರಂದು ಸೋಮವಾರ ವೈದ್ಯರು ಸೇರಿದಂತೆ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೊಳೆಹೊನ್ನೂರು ಸರಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಎನ್.ಸಂದೀಪ್ (48) ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಡಾ. ಎನ್ ಸಂದೀಪ್ ಕಳೆದ 08 ವರ್ಷಗಳಿಂದ ಹೊಳೆಹೊನ್ನೂರು ಸರಕಾರಿ ಸಮುದಾಯ ಆರೋಗ್ಯ ಕೇಂದ್ರದ ಸೇವೆ ಸಲ್ಲಿಸುತ್ತಿದ್ದರು.
shivamogga news today ಬಾಣಂತಿ ಸಾವು
ಇದರ ಬೆನ್ನಲ್ಲೇ ನಿನ್ನೆ ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿದ್ದ ಹರ್ಷಿತಾ (23) ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.
ಹೆರಿಗೆಗೆಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ, ಹರ್ಷಿತಾ ಮೇ24 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಜನ್ಮ ನೀಡಿ ಕೆಲವೇ ದಿನಗಳ್ಲಲಿ ಎದೆ ನೋವು ಕಾಣಿಸಿಕೊಂಡಿತ್ತು. ಅವರನ್ನ ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ನಿನ್ನೆ ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲು ಕರೆದೊಯ್ಯುವಾಗ ಮಾರ್ಗ ಮಧ್ಯೆದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

