shivamogga news today : ಶಿವಮೊಗ್ಗದ ಪೊಲೀಸ್​ ಅಧಿಕಾರಿ ನಂಜಪ್ಪ  ಕುಂದಾಪುರದಲ್ಲಿ ನಿಧನ

prathapa thirthahalli
Prathapa thirthahalli - content producer

shivamogga news today : ಶಿವಮೊಗ್ಗದ ಪೊಲೀಸ್​ ಅಧಿಕಾರಿ ನಂಜಪ್ಪ  ಕುಂದಾಪುರದಲ್ಲಿ ನಿಧನ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್ (59) ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೂಲತಃ ಶಿವಮೊಗ್ಗದರಾಗಿರುವ ನಂಜಪ್ಪ 2003ರಲ್ಲಿ ಉಪನಿರೀಕ್ಷಕರಾಗಿ ಸೇವೆಗೆ ನಿಯುಕ್ತಿಯಾಗಿದ್ದರು, ನಂತರ ಹಾವೇರಿ, ದಾವಣಗೆರೆ, ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ, ಕುಂಸಿ, ಮೊದಲಾದೆಡೆ ಕರ್ತವ್ಯ ನಿರ್ವಹಿಸಿದ್ದರು.  ಕಳೆದ ಅಗಸ್ಟ್ ತಿಂಗಳಿನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ‌ ಪೊಲೀಸ್ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸೋಮವಾರ ಕರ್ತವ್ಯದಲ್ಲಿರುವಾಗಲೇ ರಕ್ತದೊತ್ತಡದಿಂದ ಬಳಲುತ್ತಿದ್ದ ನಂಜಪ್ಪ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

 

Share This Article